ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂಬ ವಿವಾದಾತ್ಮಕ ಹೇಳಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಮಿತ ಅವರು ನೀಡಿರುವ ದೂರಿನಂತೆ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಾಸಕ ಹರೀಶ್ ಪೂಂಜಾ ಮೇ 22ರಂದು ಬೆಳ್ತಂಗಡಿಯ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಂಗಣದಲ್ಲಿ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಹಿಂದುಗಳ ಕೊಲೆ ಮಾಡಿದವರೆಂದು ಅವರ ಪರವಾಗಿ ಸತ್ಯಜಿತ್ ಸುರತ್ಕಲ್ ಮತಯಾಚನೆ ಮಾಡಿದರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಬಗ್ಗೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾದ ನಮಿತ ಪೂಜಾರಿ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದರು.
ಇದೀಗ ನಮಿತ ಪೂಜಾರಿ ಅವರ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕೋಮು ಪ್ರಚೋದಕ ಹಾಗೂ ದ್ವೇಷ ಉಂಟು ಮಾಡುವಂತಹ ಭಾಷಣ ಮಾಡಿದ್ದ ಬಗ್ಗೆ ಹಾಗೂ ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.