Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪೊಲೀಸ್ ಇಲಾಖೆಯ ಕೇಸರೀಕರಣಕ್ಕೆ ಬೆಂಬಲ...

ಪೊಲೀಸ್ ಇಲಾಖೆಯ ಕೇಸರೀಕರಣಕ್ಕೆ ಬೆಂಬಲ ನೀಡಿದ್ದ ಬೊಮ್ಮಾಯಿ: ಡಿ.ಕೆ.ಶಿವಕುಮಾರ್ ವಾಗ್ದಾಳಿ

24 May 2023 11:22 PM IST
share
ಪೊಲೀಸ್ ಇಲಾಖೆಯ ಕೇಸರೀಕರಣಕ್ಕೆ ಬೆಂಬಲ ನೀಡಿದ್ದ ಬೊಮ್ಮಾಯಿ: ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು, ಮೇ 24: ಮಾಜಿ ಮುಖ್ಯಮಂತ್ರಿ ಪೊಲೀಸ್ ಇಲಾಖೆ ಕೇಸರೀಕರಣ ಹಾಗೂ ನೈತಿಕ ಪೊಲೀಸ್ ಗಿರಿಗೆ ಬೆಂಬಲ ನೀಡಿದ್ದರು ಎಂದು ಬಸವರಾಜ ಬೊಮ್ಮಾಯಿ ವಿರುದ್ಧ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರೋಕ್ಷ ವಾಗ್ದಾಳಿ ನಡೆಸಿದರು.

ಬುಧವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಲು ನಾವು ಅವಕಾಶ ನೀಡುವುದಿಲ್ಲ. ಅದು ಕಾಂಗ್ರೆಸಿಗರಾಗಲಿ, ಬೇರೆ ಪಕ್ಷದವರಾಗಲಿ. ಕಾನೂನು ಪೊಲೀಸರಿಂದ ಮಾತ್ರ ರಕ್ಷಣೆ ಆಗಬೇಕು. ಅದನ್ನು ಎಲ್ಲರೂ ಪಾಲಿಸಬೇಕು’ ಎಂದರು.

ರಾಜ್ಯದ ಮೂರು, ನಾಲ್ಕು ಕಡೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಮ್ಮ ಸಮವಸ್ತ್ರ ಕಳಚಿ ರಾಜಕೀಯ ಸಂಘಟನೆಗಳ ರೀತಿಯಲ್ಲಿ ವಸ್ತ್ರ ಧರಿಸಿದ್ದರು. ಇದು ಸಂವಿಧಾನ ಪಾಲನೆ ಅಲ್ಲ. ಕರ್ನಾಟಕ ಪೊಲೀಸ್ ಇಲಾಖೆಗೆ ಅದರದೆ ಆದ ಘನತೆ ಇದೆ. ಅದನ್ನು ಕಾಪಾಡಿಕೊಳ್ಳಬೇಕು ಎಂದು ಶಿವಕುಮಾರ್ ಹೇಳಿದರು.

ಪ್ರಿಯಾಂಕ್ ಖರ್ಗೆ ನಮ್ಮ ಪಕ್ಷದ ಮಾಧ್ಯಮ ವಿಭಾಗದ ಮುಖ್ಯಸ್ಥರಾಗಿ ರಾಜ್ಯದ ಅತ್ಯಂತ ದೊಡ್ಡ ಭ್ರμÁ್ಟಚಾರದ ಬಗ್ಗೆ ಧ್ವನಿ ಎತ್ತಿದಾಗ ಅವರಿಗೆ ಸಮನ್ಸ್ ನೀಡಲಾಗಿತ್ತು? ಬೇರೆ ಯಾರಿಗೆ ಈ ರೀತಿ ಸಮನ್ಸ್ ನೀಡಿದ್ದರು? ಪೆÇಲೀಸರು ಕಾನೂನು ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.

ಪೆÇಲೀಸ್ ಇಲಾಖೆಯನ್ನು ಕಾಂಗ್ರೆಸೀಕರಣ ಮಾಡಲು ಹೊರಟಿದ್ದಾರೆ ಎಂಬ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಆರಗ ಜ್ಞಾನೇಂದ್ರ ಅಥವಾ ಬೇರೆ ಯಾವುದೇ ನಾಯಕರಿಗೆ ನಾನು ಉತ್ತರ ನೀಡುವುದಿಲ್ಲ. ಅವರ ಆಡಳಿತ ನೋಡಿ ಜನ ಅವರಿಗೆ ಉತ್ತರ ನೀಡಿದ್ದಾರೆ’ ಎಂದು ತಿರುಗೇಟು ನೀಡಿದರು.

ಎಲ್ಲ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಮತದಾರರಿಗೆ ಅಭಿನಂದನೆ ತಿಳಿಸಬೇಕು, ನಾವು ಕೊಟ್ಟಿರುವ ಐದು ಗ್ಯಾರಂಟಿ ಯೋಜನೆಗಳು ಜಾರಿ ಆಗಬೇಕು. ಅರ್ಹ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗುವಂತೆ ನೋಡಿಕೊಳ್ಳಬೇಕೆಂದು ಸೂಚಿಸಿದ್ದೇವೆ ಎಂದು ಶಿವಕುಮಾರ್ ಹೇಳಿದರು. 

ಅಧಿಕಾರ ಕೊಟ್ಟಿರುವ ಜನರಿಗೆ ನೀವು ಸರಿಯಾಗಿ ಸ್ಪಂದಿಸುವುದು ಹಾಗೂ ಉತ್ತಮ ಆಡಳಿತ ನೀಡುವುದು ನಮ್ಮ ಪ್ರಥಮ ಆದ್ಯತೆಯಾಗಿದೆ. ಶಾಸಕರು ಜನರ ಮನಸ್ಸು ಗೆಲ್ಲಬೇಕು, ಲೋಕಸಭೆ ಚುನಾವಣೆ ಪ್ರಮುಖವಾಗಿದ್ದು, ದ್ವೇಷ ಅಸೂಯೆ ಎಲ್ಲವನ್ನೂ ಮರೆತು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದರು. 

ಅಧಿಕಾರ ಬಂದಾಗ ಎಲ್ಲ ಅಧಿಕಾರಿಗಳು, ಗುತ್ತಿಗೆದಾರರು ನಿಮ್ಮನ್ನು ಸಂಪರ್ಕಿಸುತ್ತಾರೆ, ನೀವು ಯಾವುದರಲ್ಲೂ ಸಿಲುಕಿಕೊಳ್ಳಬೇಡಿ ಎಂಬ ಸಲಹೆ ನೀಡಿದ್ದೇವೆ. ಮತ್ತೆ ಶಾಸಕಾಂಗ ಸಭೆ ಕರೆದು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ತರಬೇತಿ ನೀಡಲಾಗುವುದು ಎಂದು ಶಿವಕುಮಾರ್ ಹೇಳಿದರು.

20 ಸ್ಥಾನಗಳನ್ನು ಗೆಲ್ಲಲೇಬೇಕು: ಲೋಕಸಭೆ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲಲೇಬೇಕು. ವಿಧಾನಸಭೆ ಚುನಾವಣೆ ಗೆದ್ದೆವು ಎಂದು ಸುಮ್ಮನೆ ಕೂರುವಂತಿಲ್ಲ. ಲೋಕಸಭೆ ಚುನಾವಣೆಯಲ್ಲೂ ಈ ಗೆಲುವಿನ ಯಾನ ಮುಂದುವರೆಯಬೇಕು. ಬಿಬಿಎಂಪಿ ಚುನಾವಣೆಯಲ್ಲೂ ವಿಜಯ ಸಾಧಿಸಬೇಕು ಎಂದು ಶಾಸಕರಿಗೆ ಶಿವಕುಮಾರ್ ಸಲಹೆ ನೀಡಿದ್ದಾರೆ.

ಜಿಲ್ಲಾ ಸಚಿವರು ಆಗುವವರು ಪ್ರತಿ ಜಿಲ್ಲೆಯಲ್ಲಿ ಹಾಗೂ ಶಾಸಕರು ಪ್ರತಿ ವಿಧಾನಸಭೆ ಕ್ಷೇತ್ರದಲ್ಲೂ ಪಕ್ಷದ ಕಚೇರಿ ಸ್ಥಾಪಿಸಲೇಬೇಕು. ಎಲ್ಲರಿಗೂ ಅಧಿಕಾರ ಸಿಗದಿರಬಹುದು. ಆದರೆ ನಿಮ್ಮ ಶ್ರಮಕ್ಕೆ ಗೌರವ ಸಿಗುತ್ತದೆ. ಪಕ್ಷದ ಕೆಲಸವನ್ನು ದೇವರ ಕೆಲಸ ಎಂದು ಮಾಡಬೇಕು. ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರನ್ನು ಮರೆಯಬಾರದು. ರಾಜ್ಯದ ಜನರಿಗೆ  ಸ್ವಚ್ಛ ಆಡಳಿತ ನೀಡಲು ಸಹಕರಿಸಬೇಕು. ಮೈಯೆಲ್ಲಾ ಕಣ್ಣಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.

share
Next Story
X