Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು | ಜೂನ್‌ ನಲ್ಲಿ ಸಿಎಂ...

ಕೊಡಗು | ಜೂನ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ ಪ್ರದಾನ

24 May 2023 11:34 PM IST
share
ಕೊಡಗು | ಜೂನ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ‘ದಲಿತ ರತ್ನ’ ಪ್ರಶಸ್ತಿ ಪ್ರದಾನ

ಮಡಿಕೇರಿ, ಮೇ 24: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟ ಕದಿಂದ ಮುಂದಿನ ಜೂನ್ ಎರಡನೇ ವಾರದಲ್ಲಿ ಮಡಿಕೇರಿಯಲ್ಲಿ 132ನೇ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಸಂದರ್ಭ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ ಅವರಿಗೆ ‘ದಲಿತ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಎಚ್.ಎಲ್. ದಿವಾಕರ್ ತಿಳಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಗಾಂಧಿ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಏಳೆಂಟು ಸಾವಿರ ಜನರು ಸಮಾವೇಶಗೊಳ್ಳುವ ನಿರೀಕ್ಷೆ ಇದ್ದು, ಈ ಸಂದರ್ಭ ನಗರದಲ್ಲಿ ಬೃಹತ್ ಮೆರವಣಿಗೆಯನ್ನು ಆಯೋಜಿಸಲಾಗುವುದು ಎಂದರು.

ಕೊಡಗಿನ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿನ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನಲ್ಲಿ ದಸಂಸ ಜಿಲ್ಲಾ ಘಟಕದ ಪಾತ್ರ ಮಹತ್ತರವಾದುದು ಎಂದ ದಿವಾಕರ್, ಹಿಂದಿನ ಬಿಜೆಪಿ ಸರಕಾರದ ದಲಿತ ವಿರೋಧಿ ಧೋರಣೆಗಳ ಹಿನ್ನೆಲೆಯಲ್ಲಿ ರಾಜಕೀಯ ರಹಿತವಾದ ದಸಂಸ ಈ ಬಾರಿ ಕಾಂಗ್ರೆಸ್‌ಗೆ ತನ್ನ ಸಂಪೂರ್ಣ ಬೆಂಬಲವನ್ನು ನೀಡಿ, ತಮ್ಮ ಗ್ರಾಮ ಸಮಿತಿಗಳ ಮೂಲಕ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ದಸಂಸ ಪ್ರಮುಖ ಪಾತ್ರ ವಹಿಸಿದೆಯೆಂದು ನುಡಿದರು.

ನಿಗಮ, ಅಕ್ರಮ ಸಕ್ರಮದಲ್ಲಿ ಅವಕಾಶ ನೀಡಿ: ನೂತನ ಕಾಂಗ್ರೆಸ್ ಸರಕಾರದಲ್ಲಿ ದಲಿತ ಸಂಘರ್ಷ ಸಮಿತಿಯ ಪ್ರಮುಖರಿಗೆ ಯಾವುದೇ ನಿಗಮಗಳಲ್ಲಿ ಅಧ್ಯಕ್ಷ ಸ್ಥಾನ, ಅಕ್ರಮ ಸಕ್ರಮ ಸಮಿತಿಗಳಲ್ಲಿ ಸದಸ್ಯ ಸ್ಥಾನಗಳನ್ನು ನೀಡುವಂತೆ ಇದೇ ಸಂದರ್ಭ ಮನವಿ ಮಾಡಿದರು. ಹಿಂದಿನ ಬಿಜೆಪಿ ಸರಕಾರದಲ್ಲಿ ಶೋಷಿತ ದಲಿತ ಸಮೂಹವನ್ನು ಸಂಪೂರ್ಣ ಕಡೆಗಣಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಲಾಗಿ ದ್ದು, ಎರಡು ಕ್ಷೇತ್ರಗಳಲ್ಲಿ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಮೂಲಕ ‘ದಲಿತರನ್ನು ಕಡೆಗಣಿಸಬೇಡಿ’ ಎನ್ನುವ ಸಂದೇಶ ರವಾನೆಯಾಗಿದೆಯೆಂದು ದಿವಾಕರ್ ಸ್ಪಷ್ಟಪಡಿಸಿದರು.

ದಸಂಸ ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಪೊನ್ನಪ್ಪಮಾತನಾಡಿ, ಹಿಂದಿನ ಸರಕಾರದ ಅವಧಿಯಲ್ಲಿ ದಲಿತ ಸಮುದಾಯವನ್ನು ದಲಿತ ಅಧಿಕಾರಿಗಳನ್ನು ಗೌರವಯುತವಾಗಿ ನಡೆಸಿಕೊಂಡಿಲ್ಲದಿರುವುದು, ದಲಿತ ಸಮೂಹಕ್ಕೆ ಜವಾಬ್ದಾರಿಯುತವಾದ ಯಾವುದೇ ಸ್ಥಾನಮಾನಗಳನ್ನು ನೀಡದಿರುವುದು, ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟ ವ್ಯವಸ್ಥೆ, ನಿರಂತರವಾಗಿ ಏರು ಮುಖವಾದ ನಿತ್ಯೋಪಯೋಗಿ ವಸ್ತುಗಳ ಬೆಲೆ ಏರಿಕೆ, ಡಾ. ಅಂಬೇಡ್ಕರ್‌ಗೆ ಅವಮಾನ ಮೊದಲಾದ ಕಾರಣಗಳ ಹಿನ್ನೆಲೆಯಲ್ಲಿ ಈ ಚುನಾವಣೆಯಲ್ಲಿ ದಸಂಸ ಕಾಂಗ್ರೆಸ್ ಪಕ್ಷವನ್ನು ಬಹಿರಂಗವಾಗಿ ಬೆಂಬಲಿಸಿದ್ದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ನಗರ ಸಂಘಟನಾ ಸಂಚಾಲಕ ಪಿ.ಎಂ. ಲೋಕನಾಥ್, ನಗರ ಸಂಚಾಲಕ ಸಿ.ಪಿ.ಸಿದ್ದೇಶ್ವರ್ ಉಪಸ್ಥಿತರಿದ್ದರು.

share
Next Story
X