ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಿಖಿಲ್ ಕುಮಾರಸ್ವಾಮಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪಕ್ಷ ಮರು ನಿರ್ಮಾಣ ದಿಸೆಯಲ್ಲಿ ರಾಜೀನಾಮೆ ನೀಡುತ್ತಿದ್ದು, ಪಕ್ಷ ಕಟ್ಟುವ ಕೆಲಸದಲ್ಲಿ ನಾನು ಎಂದೂ ಹಿಂಜರಿಯಲಾರೆ. ಪಕ್ಷದ ಜತೆ ಸದಾ ನಿಲ್ಲುತ್ತೇನೆ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಸೋಲೇ ಅಂತಿಮವಲ್ಲ. ಸೋಲಿನಿಂದ ಕಂಗೆಡದೆ ಪಕ್ಷವನ್ನು ಬಲವಾಗಿ ಕಟ್ಟುವ ಉದ್ದೇಶದಿಂದ ನಾವೆಲ್ಲರೂ ಅರ್ಪಣಾ ಮನೋಭಾವದೊಂದಿಗೆ ಕೆಲಸ ಮಾಡಬೇಕಿದೆ. ಆದ್ದರಿಂದ ಹೊಸ ನಾಯಕತ್ವಕ್ಕೆ ಅವಕಾಶಗಳನ್ನು ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ.ಇಬ್ರಾಹಿಂ ರಾಜೀನಾಮೆ

Next Story







