ಕಾಂಗ್ರೆಸ್ ನದ್ದು ರಿವರ್ಸ್ ಗೇರ್ ಸರ್ಕಾರ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್ ನದ್ದು ರಿವರ್ಸ್ ಗೇರ್ ಸರ್ಕಾರ. ಅವರು ನೀಡಿರುವ ಗ್ಯಾರಂಟಿಯಲ್ಲೂ, ನಾವು ಮಾಡಿದ ಜನಪರ ಕಾನೂನಿನಲ್ಲಿಯೂ ರಿವರ್ಸ್ ಹೋಗುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತುಷ್ಟೀಕರಣ ರಾಜಕಾರಣ ಮಾಡುತ್ತಾರೆ ಅನ್ನೋದು ಗೊತ್ತಿದೆ. ಅವರ ಅಧಿಕಾರ ಇದೆ, ಏನು ಮಾಡುತ್ತಾರೆ ನೊಡೋಣ. ಆದರೆ ಸಾರ್ವತ್ರಿಕವಾಗಿ ಜನ ಸಮುದಾಯಕ್ಕೆ ಅನ್ಯಾಯ ಮಾಡಿದರೆ ನಾವು ಕಾನೂನಾತ್ಮಕವಾಗಿ, ರಾಜಕೀಯವಾಗಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು.
ಅಧಿಕಾರ ಬಂದಾಗ ಸ್ವೇಚ್ಛಾಚಾರವಾಗಿ ಎಲ್ಲವನ್ನು ಬದಲಾವಣೆ ಮಾಡುತ್ತೇವೆ ಅನ್ನೋದು ದುರಹಂಕಾರದ ಮಾತು. ಕಾಂಗ್ರೆಸ್ ಸರ್ಕಾರ ಸೇಡಿನ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
Next Story





