ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯಲಿ: ಕಾಂಗ್ರೆಸ್
''ನಾವು 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ''

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ತಕ್ಷಣ ಜಾರಿಗೊಳಿಸುವಂತೆ ಒತ್ತಾಯಿಸುತ್ತಿರುವ ವಿಪಕ್ಷ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.
ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ''ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ'' ಎಂದು ಸ್ಪಷ್ಟಪಡಿಸಿದೆ.
''ಬಿಜೆಪಿ ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆದುಕೊಳ್ಳಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ'' ಎಂದು ತಿರುಗೇಟು ನೀಡಿದೆ.
''ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ? ಅಮಿತ್ ಷಾಅವರದ್ದೋ? ಬೊಮ್ಮಾಯಿಯವರದ್ದೋ? ಮೋದಿಯವರದ್ದೋ ? ನಳಿನ್ ಕಟೀಲರದ್ದೋ? ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರು?'' ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ.
— Karnataka Congress (@INCKarnataka) May 25, 2023
ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ.@BJPKarnataka ನಾಯಕರು ಕನ್ನಡಿಗರು ನೀಡಿದ ತಪರಾಕಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ 'ವಿರೋಧಪಕ್ಷದ ನಾಯಕ' ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ.