ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಮುಂದುವರಿಯಲಿದ್ದಾರೆ: ಕುಮಾರಸ್ವಾಮಿ
ಬೆಂಗಳೂರು: 'ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ, ಯುವ ಘಟಕದ ಅಧ್ಯಕ್ಷರಾಗಿ ನಿಖಿಲ್ ಮುಂದುವರಿಯಲಿದ್ದಾರೆ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಶುಕ್ರವಾರ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಸೋಲಿನ ನೈತಿಕ ಹೊಣೆ ಹೊತ್ತು ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆ ಅಂಗೀಕರಿಸಲ್ಲ, ಈ ಬಗ್ಗೆ ಪಕ್ಷದಲ್ಲಿ ತೀರ್ಮಾನ ಆಗಿದೆ. ನಿಖಿಲ್ ಕೂಡ ಯುವ ಘಟಕದ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
''ಚುನಾವಣೆಗೂ ಮುನ್ನ ಕಾಂಗ್ರೆಸ್ ನಿನಗೂ ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ. ರಾಜ್ಯದ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ. ಯಾವ ಮಹಿಳೆ ಕೂಡ ಟಿಕೆಟ್ ಪಡೆಯಬೇಡಿ. ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿ'' ಎಂದು ಕುಮಾರಸ್ವಾಮಿ ಕರೆ ನೀಡಿದರು.