ರಾಯಚೂರು: ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಮೃತ್ಯು, 20ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು, ಮೇ 26: ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಮೃತಪಟ್ಟು, 20ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ವರದಿಯಾಗಿದೆ.
ಹನುಮೇಶ್ (5) ಕಲುಷಿತ ನೀರು ಸೇವಿಸಿ ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಅಸ್ವಸ್ಥರಿಗೆ ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಮತ್ತು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಇನ್ನು ಈ ಘಟನೆಗೆ ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಪೊಲೀಸರು ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಕುಡಿಯುವ ನೀರಿಗೆ ತ್ಯಾಜ್ಯ ನೀರು ಸೇರಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Next Story