Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಸಕ ಹರೀಶ್ ಪೂಂಜ ಹಿಂದುತ್ವದ...

ಶಾಸಕ ಹರೀಶ್ ಪೂಂಜ ಹಿಂದುತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ: ಹಿಂಜಾವೇ ಆರೋಪ

26 May 2023 2:42 PM IST
share
ಶಾಸಕ ಹರೀಶ್ ಪೂಂಜ ಹಿಂದುತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ: ಹಿಂಜಾವೇ ಆರೋಪ

ಬೆಳ್ತಂಗಡಿ: ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜ ಅವರು ಹಿಂದುತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ. ಹರೀಶ್ ಪೂಂಜರ ಕಚೇರಿಯಿಂದಲೇ ಗೋ ಸಾಗಾಟ ನಡೆಯುತ್ತಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಎಂಬವರೇ ಗೋಸಾಗಾಟ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋಡಿ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಎಂಬ ಹೆಸರಿನಲ್ಲಿ ಹರೀಶ್ ಪೂಂಜರ ಜನರು ಕೇಸರಿ ಹಾಕಿಕೊಂಡು ದನ ಕೊಂಡು ಹೋಗಿ ಕಸಾಯಿ ಖಾನೆಗೆ ಕೊಡುತ್ತಿದ್ದಾರೆ. ಹಲವು ಗ್ರಾಮಗಳಲ್ಲಿ ಇದು ನಡೆಯುತ್ತಿದೆ. ಇಂತಹವರನ್ನು ಹಿಡಿದ ಎಷ್ಟೋ ಉದಾಹರಣೆಗಳಿವೆ. ಸಾಕ್ಷಿ ಸಮೇತ ಸಾಬೀತುಪಡಿಸುತ್ತೇವೆ. ಹರೀಶ್ ಪೂಂಜರ ಮನೆಯ ಸಮೀಪವೇ ಅಕ್ರಮವಾಗಿ ದನ ಕಡಿಯುವ ಕಾರ್ಯ ನಡೆಯುತ್ತಿದೆ. ಇದು ಹರೀಶ್ ಪೂಂಜರಿಗೆ ತಿಳಿದಿದ್ದರೂ ಅವರು ಬೆಂಬಲ ನೀಡುತಿದ್ದಾರೆ ಎಂದು ಆರೋಪಿಸಿದರು.

ದನ ಕಡಿಯು ಕೆಲಸ ಮಾಡುವ ಕ್ರೈಸ್ತ ವ್ಯಕ್ತಿಯೊಬ್ಬನನ್ನು ಬಿಜೆಪಿಯ ನಾಯಕನನ್ನಾಗಿ ಮಾಡಿ, ಅವನು ಬಿಜೆಪಿ ಎಂದು ಕೇಸರಿ ಶಾಲು ಹಾಕಿ  ತಿರುಗುತ್ತಾನೆ. ಇದು ಕೇಸರಿ ಶಾಲು ಹಾಗೂ ಹಿಂದೂ ಧರ್ಮಕ್ಕೆ ಮಾಡಿದ ಅಪಮಾನವಾಗಿದೆ ಹರೀಶ್ ಪೂಂಜನ ಕಾರ್ಯಕರ್ತರು ಕೇಸರಿಯನ್ನು ಅಪಮಾನಿಸುತ್ತಿದ್ದಾರೆ ದೇವಸ್ಥಾನದ ಬ್ರಹ್ಮಕಲಶೋತ್ಸವಗಳಲ್ಲಿ ಅನಗತ್ಯ ರಾಜಕೀಯ ಮಾಡುತ್ತಿದ್ದಾರೆ. ಪೂಂಜನ ರಾಜಕೀಯದಿಂದಾಗಿ ತಾಲೂಕಿನ  ದೇವಸ್ಥಾನಗಳಲ್ಲಿ ಬ್ರಹ್ಮಕಲಶವೇ ಸರಿಯಾಗಿ ನಡೆದಿಲ್ಲ. ಇದು ತಾಲೂಕಿಗೆ ಶಾಪವಾಗಿ ಪರಿಣಮಿಸಲಿದೆ ಎಂದು ಅವರು ಹೇಳಿದರು.

ಸಿದ್ದಾರಾಮಯ್ಯ 24ಮಂದಿ ಹಿಂದೂಗಳನ್ನು ಹತ್ಯೆ ಮಾಡಿರುವುದಾಗಿ ಹರೀಶ್ ಪೂಂಜ ಹೇಳುತ್ತಾರೆ. ಇದು ಸತ್ಯವಾದರೆ ಸಿದ್ದರಾಮಯ್ಯ ಜೈಲಿಗೆ ಹೋಗಬೇಕು. ಹರೀಶ್ ಪೂಂಜ ಸುಳ್ಳು ಹೇಳಿದರೆ ಅವರಿಗೆ ಶಿಕ್ಷೆಯಾಗಬೇಕು. ಸಿದ್ದರಾಮಯ್ಯ ಕೊಲೆ ಮಾಡಿದ್ದು ಸರಿಯಾದರೆ ಕಳೆದ ಐದು ವರ್ಷ ಹರೀಶ್ ಪೂಂಜ ಏನು ಮಾಡುತ್ತಿದ್ದರು. ಬಿಜೆಪಿ ಸರಕಾರ ಏನುಮಾಡುತ್ತಿತ್ತು. ಈಗ ಹರೀಶ್ ಪೂಂಜನಿಗೆ ಜ್ಞಾನೋದಯವಾಗಿದೆಯಾ ಎಂದು ಪ್ರಶ್ನಿಸಿದರು.

ಹರೀಶ್ ಪೂಂಜ ಅವರು ವೇದಿಕೆಯಲ್ಲಿ ತನಗೆ ಮುಸ್ಲಿಮರ ಮತ ಬೇಡ ಎಂದು ಹೇಳಿ ಹಿಂದುಗಳನ್ನು ದಾರಿತಪ್ಪಿಸಿ ಮುಸ್ಲಿಮರಿಗೆ ಕ್ರೈಸ್ತ ರಿಗೆ ನೆರವಾಗಿದ್ದಾರೆ. ಅವರಿಗೆ ಕೊಡುವ ಬಗ್ಗೆ ನಮ್ಮ ತಕರಾರಿಲ್ಲ. ಆದರೆ ಹಿಂದೂಗಳ ಮುಂದೆ ಬಂದು ಸುಳ್ಳು ಹೇಳುವುದು ಯಾಕೆ. ಇಂತಹ ಇಬ್ಬಗೆಯ ನೀತಿಯನ್ನು ಅಂದಿನಿಂದಲೂ ಹರೀಶ್ ಪೂಂಜ ಅನುಸರಿಸಿಕೊಂಡು ಬಂದಿದ್ದಾರೆ  ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಮುಖಂಡರು ಉಪಸ್ಥಿತರಿದ್ದರು

share
Next Story
X