ಆರೆಸ್ಸೆಸ್ ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು: ನಳಿನ್ ಗೆ ಕಾಂಗ್ರೆಸ್ ತಿರುಗೇಟು

ಬೆಂಗಳೂರು, ಮೇ 26: ‘ಆರೆಸ್ಸೆಸ್ ನಿಷೇಧಕ್ಕೆ ಕೈ ಹಾಕಿದರೆ ಕಾಂಗ್ರೆಸ್ ಇರಲ್ಲ’ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಭಾರತದಲ್ಲಿ ಆರೆಸ್ಸೆಸ್ ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು ಎಂದು ತಿರುಗೇಟು ನೀಡಿದೆ.
ಶುಕ್ರವಾರ ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಸರ್ದಾರ್ ಪಟೇಲರೆ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು. ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ. ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು ಎಂದು ತಿಳಿಸಿದೆ.
ಭಾರತದಲ್ಲಿ RSS ಎಂಬ ವಿಚ್ಛಿದ್ರಕಾರಿ ಸಂಘಟನೆ 3 ಬಾರಿ ನಿಷೇಧಕ್ಕೊಳಪಟ್ಟಿತ್ತು.
— Karnataka Congress (@INCKarnataka) May 26, 2023
ಸರ್ದಾರ್ ಪಟೇಲರೇ ಭಾರತ ವಿರೋಧಿ ಸಂಘಟನೆ ಎಂಬ ಸರ್ಟಿಫಿಕೇಟ್ ನೀಡಿದ್ದರು.
ಕಾಂಗ್ರೆಸ್ ಆಗಲೂ ಇತ್ತು ಈಗಲೂ ಇದೆ, ಮುಂದೆಯೂ ಇರಲಿದೆ.
ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಆವರಣದಲ್ಲಿ RSS ಚಟುವಟಿಕೆಗಳನ್ನು ತಡೆಯುವ ಕುರಿತು ವಿಮರ್ಶಿಸಲಾಗುವುದು. pic.twitter.com/aVNnfCiStt