ಉಡುಪಿ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕಾರ್ಯಾಗಾರ
ಉಡುಪಿ, ಮೇ 26: ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಹಾಗೂ ಕೆಎಂಸಿ ಮಣಿಪಾಲದ ಕಣ್ಣಿನ ವಿಭಾಗಗಳ ಆಶ್ರಯದಲ್ಲಿ ಜಿಲ್ಲೆಯ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಯಗಳಿಗೆ ಉಪಕೇಂದ್ರ ಮಟ್ಟದಲ್ಲಿ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಕುರಿತು ಜಿಲ್ಲಾ ಮಟ್ಟದ ಕಾರ್ಯಗಾರ ಇಂದು ಮಣಿಪಾಲ ಕೆ.ಎಂ.ಸಿ.ಯ ಇಂಟರ್ಯಾಕ್ಟ್ ಲೆಕ್ಚರ್ ಹಾಲ್ನಲ್ಲಿ ನಡೆಯಿತು.
ಕಾರ್ಯಾಗಾರವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಲತಾ ನಾಯಕ್, ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ. ಪದ್ಮರಾಜ್ ಹೆಗಡೆ, ಮಣಿಪಾಲ ಕೆಎಂಸಿಯ ಮುಖ್ಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಕೆಎಂಸಿ ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ.ಅಶ್ವಿನ್ ಕುಮಾರ್, ನೇತ್ರ ತಜ್ಞ ಡಾ.ಯೋಗೀಶ್ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
Next Story