Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿಗಳನ್ನು ದೇಶದ...

ವಿದ್ಯಾರ್ಥಿಗಳನ್ನು ದೇಶದ ಆಸ್ತಿಯನ್ನಾಗಿಸುವುದೇ ಎನ್‌ಇಪಿ ಗುರಿ: ಪ್ರೊ. ಪಿ ಎಸ್. ಯಡಪಡಿತ್ತಾಯ

ವಿವಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಪದ್ಧತಿ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

26 May 2023 9:44 PM IST
share
ವಿದ್ಯಾರ್ಥಿಗಳನ್ನು ದೇಶದ ಆಸ್ತಿಯನ್ನಾಗಿಸುವುದೇ ಎನ್‌ಇಪಿ ಗುರಿ: ಪ್ರೊ. ಪಿ ಎಸ್. ಯಡಪಡಿತ್ತಾಯ
ವಿವಿ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ಪದ್ಧತಿ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ

ಮಂಗಳೂರು:  ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ- 2020ಯ ಅನುಷ್ಠಾನದಲ್ಲಿ ಸವಾಲುಗಳಿವೆ. ಅವುಗಳನ್ನು ಮೆಟ್ಟಿ ನಿಂತು ವಿದ್ಯಾರ್ಥಿಗಳನ್ನು ದೇಶದ ಆಸ್ತಿಯನ್ನಾಗಿಸುವುದೇ ಎಲ್ಲರ ಗುರಿಯಾಗಿದೆ. ದೇಶ ಮೊದಲು, ನಂತರ ವ್ಯಕ್ತಿತ್ವ ಮತ್ತು ಶಿಕ್ಷಕ ಎಂಬ ಚಿಂತನೆ ಎಲ್ಲಾ ವಿದ್ಯಾರ್ಥಿ ಗಳಲ್ಲಿರಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅಭಿಪ್ರಾಯಪಟ್ಟಿದ್ದಾರೆ.

ಅವರು ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ನಡೆದ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಮಂಗಳೂರು ವಿಶ್ವವಿದ್ಯಾನಿಲಯ ವಿಭಾಗವು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್, ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜುಗಳ ಸಹಯೋಗದಲ್ಲಿ ‘ರಾಷ್ಟ್ರೀಯ ಶಿಕ್ಷಣ ಪದ್ಧತಿ 2020 ರ ಅನುಷ್ಠಾನ: ಸವಾಲುಗಳು ಮತ್ತು ಭವಿಷ್ಯ- ಪಠ್ಯಕ್ರಮ, ಮೌಲ್ಯಮಾಪನ, ಫಲಿತಾಂಶ ಎಂಬ ರಾಷ್ಟ್ರೀಯ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಬಿಆರ್‌ಎಸ್‌ಎಂ ನ ಮಧ್ಯ ಕ್ಷೇತ್ರೀಯ ಪ್ರಮುಖ್ ಡಾ. ರಘು ಅಕಮಂಚಿ ಮಾತನಾಡಿ, ಶಿಕ್ಷಕರು ಎನ್‌ಇಪಿಯ ಸಾಧಕ-ಬಾಧಕಗಳನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಬುದ್ಧಿಯ ಜೊತೆಗೆ ಹೃದಯಕ್ಕೂ ಶಿಕ್ಷಣ ನೀಡಿ ವಿದ್ಯಾರ್ಥಿಗಳಲ್ಲಿ ಮಾನವೀಯತೆ ಬೆಳೆಯುವಂತೆ ಮಾಡುವ ಉದ್ದೇಶ ಈ ಶಿಕ್ಷಣ ನೀತಿಗಿದೆ ಎಂದರು. ಮುಖ್ಯ ಅತಿಥಿ, ಎಬಿಆರ್‌ಎಸ್‌ಎಂ ರಾಷ್ಟ್ರೀಯ ಸಂಘಟನಾ ಜೊತೆ ಕಾರ್ಯದರ್ಶಿ ಜಿ. ಲಕ್ಷ್ಮಣ್ ಅವರು ಮಾತನಾಡಿ, ಹೊಸ ಶಿಕ್ಷಣ ನೀತಿ ಹೊಸ ಸವಾಲುಗಳನ್ನು ಎದುರಿಸಲು ವಿದ್ಯಾರ್ಥಿಗಳನ್ನು ತಯಾರು ಮಾಡುತ್ತದೆ ಎಂದರು.
ವಿಶ್ವವಿದ್ಯಾನಿಲಯ ಅನುದಾನ ಆಯೋಗದ (ಯುಜಿಸಿ) ಕಾರ್ಯದರ್ಶಿ ಪ್ರೊ. ಮನೀಶ್ ಆರ್. ಜೋಷಿ ದಿಕ್ಸೂಚಿ ಭಾಷಣ ಮಾಡಿದರು.

ಬೆಂಗಳೂರು ಕೆಆರ್‌ಎಂಎಸ್‌ಎಸ್ ರಾಜ್ಯಾಧ್ಯಕ್ಷ ಡಾ.ಗುರುನಾಥ್ ಬಡಿಗೇರ್, ಸಲಹಾ ಸಮಿತಿಯ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಯೋಜನೆ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಮಂಡಳಿಯ ನಿರ್ದೇಶಕ ಡಾ. ಮಂಜಯ್ಯ, ಮಂಗಳೂರು ವಿವಿ ಸಿಂಡಿಕೇಟ್ ಸದಸ್ಯ ರಮೇಶ್ ಕುಮಾರ್ ಮೊದಲಾದವರು ವೇದಿಕೆಯಲ್ಲಿದ್ದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದರು. ಕೆಆರ್‌ಎಂಎಸ್‌ಎಸ್ ಮಂಗಳೂರು ವಿಭಾಗದ ಮುಖ್ಯಸ್ಥೆ ಡಾ.ಸುಧಾ ಎನ್ ವೈದ್ಯ, ಕಾರ್ಯದರ್ಶಿ ವೆಂಕಟೇಶ್ ನಾಯಕ್, ಕೋಶಾಧಿಕಾರಿ ಆಶಾಲತಾ, ಸಂಚಾಲಕಿ ಡಾ. ಶೋಭಾ, ಸಹ-ಸಂಯೋಜಕಿ ಡಾ. ಜ್ಯೋತಿ ಪ್ರಿಯಾ, ಸಂಘಟನಾ ಕಾರ್ಯದರ್ಶಿ ಡಾ. ಸುಭಾಷಿಣಿ ಶ್ರೀವತ್ಸ ಮೊದಲಾದವರು ಉಪಸ್ಥಿತರಿದ್ದರು.

ಕೇರಳದ ಕೇಂದ್ರೀಯ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಕಾವ್ಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಜಿ. ಲಕ್ಷ್ಮಣ್ ಹಾಗೂ ಪ್ರೊ. ಪಿ ಸುಬ್ರಹ್ಮಣ್ಯ ಯಡಪಡಿತ್ತಾಯ ಅವರನ್ನು ಸನ್ಮಾನಿಸಲಾಯಿತು.

share
Next Story
X