ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್‌ರನ್ನು ಭೇಟಿಯಾದ ಸ್ಪೀಕರ್ ಯು.ಟಿ. ಖಾದರ್

ಮಂಗಳೂರು: ಕರ್ನಾಟಕ ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಯು .ಟಿ.ಖಾದರ್ ರವರು ಮಂಗಳೂರು ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯಲ್ಲಿ ದ.ಕ ಜಿಲ್ಲಾ ಖಾಝಿ ಅಲ್‌ಹಾಜ್ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್‌ಅಝ್ಹರ್ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.
ಮಸೀದಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್ ಹಾಜಿ, ಆಡಳಿತ ಸಮಿತಿ ಸದಸ್ಯರಾದ ಅಬ್ದುಲ್ ಸಮದ್ ಹಾಜಿ, ಬದ್ರಿಯಾ ಶಿಕ್ಷಣ ಸಂಸ್ಥೆ ಅಧ್ಯಕ್ಷರಾದ ಸಿ.ಮಹ್ಮೂದ್ ಹಾಜಿ, ದ.ಕ ಜಿಲ್ಲಾ ಸಮಸ್ತ ಮದ್ರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷರಾದ ಮೊಯ್ದೀನ್ ಹಾಜಿ ಅಡ್ಡೂರು, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ಹಾಜಿ ಕೋಡಾಜೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story