ಜವಾಹರಲಾಲ್ ನೆಹರೂ 59ನೇ ಪುಣ್ಯತಿಥಿ: ಪುಷ್ಪನಮನ ಸಲ್ಲಿಸಿದ ಸಿ ಎಂ ಸಿದ್ದರಾಮಯ್ಯ
ಕೆಪಿಸಿಸಿ ಕಚೇರಿಯಲ್ಲೂ ಜವಾಹರಲಾಲ್ ನೆಹರೂ ಪುಣ್ಯ ಸ್ಮರಣೆ

ಬೆಂಗಳೂರು: ಭಾರತದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರೂ ಅವರ 59ನೇ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿರುವ ನೆಹರೂರವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ದೇಶ ಕಟ್ಟಲು ಪಂಚವಾರ್ಷಿಕ ಯೋಜನೆಗಳ ಮೂಲಕ ದಿಟ್ಟ ಹೆಜ್ಜೆ ಇಟ್ಟ ನವ ಭಾರತ ನಿರ್ಮಾತೃ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ಭಾರತದ ಮೊದಲ ಪ್ರಧಾನಿ, 'ಭಾರತ ರತ್ನ' ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯಂದು ನಮ್ಮ ಗೌರವಪೂರ್ವಕ ನಮನಗಳು ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಸ್ವಾತಂತ್ರ್ಯ ಹೋರಾಟಗಾರ, ದೇಶದ ಮೊದಲ ಪ್ರಧಾನಮಂತ್ರಿ, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರಾದ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳನ್ನು ಸಲ್ಲಿಸುತ್ತೇನೆ. ದೇಶದ ಅಭಿವೃದ್ಧಿಗೆ ಶ್ರೀಯುತರು ನೀಡಿದ ಕೊಡುಗೆಗಳು ಸ್ಮರಣೀಯ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲೂ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಕಾರ್ಯಕ್ರಮ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ಸಹಿತ ಹಲವು ನಾಯಕರು ಪಾಲ್ಗೊಂಡಿದ್ದರು.
LIVE : ಭಾರತದ ಮೊದಲ ಪ್ರಧಾನಿ 'ಭಾರತ ರತ್ನ' ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆ, ಕೆಪಿಸಿಸಿ ಕಚೇರಿ. https://t.co/IjgKh12iZz
— Karnataka Congress (@INCKarnataka) May 27, 2023
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ,
— Karnataka Congress (@INCKarnataka) May 27, 2023
ದೇಶ ಕಟ್ಟಲು ಪಂಚವಾರ್ಷಿಕ ಯೋಜನೆಗಳ ಮೂಲಕ ದಿಟ್ಟ ಹೆಜ್ಜೆ ಇಟ್ಟ ನವ ಭಾರತ ನಿರ್ಮಾತೃ,
ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ಭಾರತದ ಮೊದಲ ಪ್ರಧಾನಿ,
'ಭಾರತ ರತ್ನ' ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯಂದು ನಮ್ಮ ಗೌರವಪೂರ್ವಕ ನಮನಗಳು. pic.twitter.com/3f4aAHA26h
ಸ್ವಾತಂತ್ರ್ಯ ಹೋರಾಟಗಾರ, ದೇಶದ ಮೊದಲ ಪ್ರಧಾನಮಂತ್ರಿ, ಆಧುನಿಕ ಭಾರತದ ನಿರ್ಮಾತೃಗಳಲ್ಲಿ ಒಬ್ಬರಾದ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳನ್ನು ಸಲ್ಲಿಸುತ್ತೇನೆ. ದೇಶದ ಅಭಿವೃದ್ಧಿಗೆ ಶ್ರೀಯುತರು ನೀಡಿದ ಕೊಡುಗೆಗಳು ಸ್ಮರಣೀಯ. pic.twitter.com/C13D4IkUTb
— DK Shivakumar (@DKShivakumar) May 27, 2023
