Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ಯಾರಂಟಿ ಜಾರಿಯಾಗದಿದ್ದರೆ ಜೂ.1ರಿಂದ...

ಗ್ಯಾರಂಟಿ ಜಾರಿಯಾಗದಿದ್ದರೆ ಜೂ.1ರಿಂದ ಧರಣಿ: ಕುಯಿಲಾಡಿ ಸುರೇಶ್ ನಾಯಕ್

27 May 2023 11:36 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗ್ಯಾರಂಟಿ ಜಾರಿಯಾಗದಿದ್ದರೆ ಜೂ.1ರಿಂದ ಧರಣಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ, ಮೇ 27: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಐದು ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ಹೇಳಿದೆ. ಆದರೆ ಸಚಿವ ಸಂಪುಟ ಸಭೆ ನಡೆದು ಒಂದು ವಾರಗಳಾದರೂ ಯಾವುದೇ ಗ್ಯಾರಂಟಿಗಳು ಇನ್ನೂ ಜಾರಿಯಾಗಿಲ್ಲ. ಆದಷ್ಟು ಬೇಗ ಜಾರಿ ಮಾಡದಿದ್ದರೆ ಜೂನ್ 1ರಿಂದ ಬೀದಿಗೆ ಇಳಿದು ಧರಣಿ ನಡೆಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ತಿಳಿಸಿದ್ದಾರೆ.

ಉಡುಪಿ ಬಿಜೆಪಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ಧರಾಮಯ್ಯ, ಡಿಕೆಶಿ, ಖರ್ಗೆ, ರಾಹುಲ್ ಎಲ್ಲರೂ ಎಲ್ಲರಿಗೂ ಉಚಿತ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಆದುದರಿಂದ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡುವಾಗ ಯಾವುದೇ ಷರತ್ತುಗಳನ್ನು ವಿಧಿಸಬಾರದು. ಈ ಬಗ್ಗೆ ನಮ್ಮ ಕಾರ್ಯಕರ್ತರು ಮನೆಮನೆಗೆ ಹೋಗಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಿದ್ದಾರೆ ಎಂದರು.

ಜಿಲ್ಲೆಯ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಸುವಾಗ ಹಣ ಪಾವತಿ ಮಾಡಬಾರದು. ಒಂದು ವೇಳೆ ಸಿಬ್ಬಂದಿ ಕಿರುಕುಳ ಕೊಟ್ಟರೆ ಬಿಜೆಪಿ ಕಚೇರಿಗೆ ಕರೆ ಮಾಡಿ ತಿಳಿಸಿ, ನಮ್ಮ ಕಾರ್ಯಕರ್ತರು ಬರುತ್ತಾರೆ. ಅದೇ ರೀತಿ ವಿದ್ಯುತ್ ಬಿಲ್ ಕೂಡ ಯಾರು ಪಾವತಿಸಬಾರದು. ಕೇಂದ್ರ ಸರಕಾರ ಉಚಿತವಾಗಿ ನೀಡುವ ಅಕ್ಕಿ ಬಿಟ್ಟು ರಾಜ್ಯ ಸರಕಾರವೇ 10 ಕೆ.ಜಿ. ಅಕ್ಕಿ ಕೊಡ ಬೇಕು. ನಿರುದ್ಯೋಗ ಭತ್ಯೆ ಈ ಬಾರಿ ಉತ್ತೀರ್ಣರಾದವರಿಗೆ ಮಾತ್ರ ಎಂದು ಹೇಳು ಮೂಲಕ ಸರಕಾರ ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುವ ಕೆಲಸ ಮಾಡ ಬಾರದು. ಕಾಂಗ್ರೆಸ್ ಅಧಿಕಾರಕ್ಕೆ ಬಂದರಿರುವುದು ಸುಳ್ಳು ಭರವಸೆಗಳಿಂದಲೇ ಹೊರತು ಸಾಧನೆಯಿಂದಲ್ಲ ಎಂದು ಅವರು ಟೀಕಿಸಿದರು.

ನರೇಂದ್ರ ಮೋದಿ 15ಲಕ್ಷ ರೂ. ಹಣವನ್ನು ನಿರ್ದಿಷ್ಟವಾಗಿ ಜನ ಖಾತೆಗೆ ಹಾಕುತ್ತೇನೆ ಎಂದು ಹೇಳಿಲ್ಲ. ಮೊದಲೇ ಸಚಿವ ಸಂಪುಟದಲ್ಲಿ ಜನರ ಖಾತೆಗೆ  ಹಣ ಹಾಕುವ ಘೋಷಣೆ ಮಾಡಿಲ್ಲ. ಕಪ್ಪು ಹಣ ತಂದರೆ ಪ್ರತಿಯೊಬ್ಬರ ಖಾತೆಗೆ 15ಲಕ್ಷ ರೂ. ಹಣ ಬರುತ್ತದೆ ಎಂದು ಹೇಳಿದ್ದಾರೆ. ಅದನ್ನು ಬೇರೆ ಬೇರೆ ಯೋಜನೆಗಳ ರೂಪದಲ್ಲಿ ಅಂದರೆ ಆಯುಷ್ಮಾನ್ ಯೋಜನೆ, ಕೃಷಿ ಸಮ್ಮಾನ್ ಯೋಜನೆ ಮೂಲಕ ಕೊಟ್ಟಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ರಾಘವೇಂದ್ರ ಕಿಣಿ, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

ಸುಕುಮಾರ್ ಶೆಟ್ಟಿ ವಿರುದ್ಧ ರಾಜ್ಯ ಘಟಕಕ್ಕೆ ವರದಿ

ಚುನಾವಣೆ ಸಂದರ್ಭದಲ್ಲಿ ಪಕ್ಷ ವಿರೋಧಿ ಚಟುವಟಿಕೆಗೆ ಸಂಬಂಧಿಸಿ ಬೈಂದೂರು ಮಾಜಿ ಶಾಸಕ ಸುಕುಮಾರ್ ಶೆಟ್ಟಿ ವಿರುದ್ಧ ಕಾರ್ಯಕರ್ತರು ಪಕ್ಷಕ್ಕೆ ದೂರು ಕೊಟ್ಟಿದ್ದಾರೆ. ಆ ಕುರಿತ ವರದಿಯನ್ನು ರಾಜ್ಯ ಘಟಕಕ್ಕೆ ಕಳುಹಿಸಿ ಕೊಡಲಾಗುವುದು ಎಂದು ಸುರೇಶ್ ನಾಯಕ್ ಕುಯಿಲಾಡಿ ತಿಳಿಸಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ಪಟ್ಟಿಯನ್ನು ಆಯಾ ಮಂಡಲ ಗಳಿಂದ ಪಡೆದುಕೊಂಡಿದ್ದೇವೆ. ಮೂರು ನಾಲ್ಕು ದಿನಗಳಲ್ಲಿ ಇವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ನಮ್ಮ ಮಿತಿಯಲ್ಲಿ ಇರದ ನಾಯಕರ ಪಟ್ಟಿಯನ್ನು ರಾಜ್ಯಕ್ಕೆ ಕಳುಹಿಸಿಕೊಡಲಾಗುವುದು. ಪಕ್ಷದ ವಿರೋಧಿ ಚಟುವಟಿಕೆ ಯನ್ನು ನಾವು ಸಹಿಸಿಕೊಳ್ಳು ವುದಿಲ್ಲ. ಪಕ್ಷಕ್ಕೆ ನಿರಂತರ ತೊಂದರೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X