108 ಆಂಬುಲೆನ್ಸ್‌ನಲ್ಲಿ ಸುರಕ್ಷಿತ ಹೆರಿಗೆ

ಉಡುಪಿ, ಮೇ 27: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆ ಯೊಬ್ಬರು 108 ಆ್ಯಂಬುಲೆನ್ಸ್‌ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ನಸುಕಿನ ವೇಳೆ ನಡೆದಿದೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಸರೋಜ(28) ಎಂಬವರನ್ನು ಆದಿ ಉಡುಪಿಯಿಂದ 108 ಆ್ಯಂಬುಲೆನ್ಸ್‌ನಲ್ಲಿ ಕರೆದುಕೊಂಡು ಬರುತ್ತಿದ್ದು, ಈ ವೇಳೆ ಮಹಿಳೆ ದಾರಿ ಮಧ್ಯೆ ಗಂಡು ಮಗುವಿಗೆ ಜನ್ಮ ನೀಡಿದರು. ಆ್ಯಂಬುಲೆನ್ಸ್ ಸಹಾಯಕ ಹಾಗೂ ಚಾಲಕರು ಸುರಕ್ಷಿತವಾಗಿ ತಾಯಿ ಮತ್ತು ಮಗುವನ್ನು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಸೇರಿಸಿದ್ದಾರೆ. ತಾಯಿ ಮಗು ಆರೋಗ್ಯವಾಗಿ ಇದ್ದಾರೆ ಎಂದು ತಿಳಿದುಬಂದಿದೆ.
Next Story