Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಾವಳಿಯ ಫಲಿತಾಂಶ ಆಘಾತಕಾರಿಯಾಗಿದೆ:...

ಕರಾವಳಿಯ ಫಲಿತಾಂಶ ಆಘಾತಕಾರಿಯಾಗಿದೆ: ವಿನಯಕುಮಾರ್ ಸೊರಕೆ

ಕಾಪುವಿನಲ್ಲಿ ಕೃತಜ್ಞತಾರ್ಪಣಾ ಸಭೆ

27 May 2023 8:43 PM IST
share
ಕರಾವಳಿಯ ಫಲಿತಾಂಶ ಆಘಾತಕಾರಿಯಾಗಿದೆ: ವಿನಯಕುಮಾರ್ ಸೊರಕೆ
ಕಾಪುವಿನಲ್ಲಿ ಕೃತಜ್ಞತಾರ್ಪಣಾ ಸಭೆ

ಕಾಪು: ಕರ್ನಾಟಕ ರಾಜ್ಯದಲ್ಲಿ ಜನರು ಬದಲಾವಣೆ ಬಯಸಿ ಕಾಂಗ್ರೆಸ್ ಪಕ್ಷಕ್ಕೆ  ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿ ಪಕ್ಷವನ್ನು ಅಧಿಕಾರದ ಚುಕ್ಕಾಣಿ ಹಿಡಿಯುವಂತೆ ಮಾಡಿದರೆ, ಕರಾವಳಿ ಭಾಗದಲ್ಲಿ ಅದಕ್ಕೆ ವ್ಯತಿರಿಕ್ತವಾದ ಫಲಿತಾಂಶ ಬಂದಿರುವುದು ನಿಜಕ್ಕೂ ಅಚ್ಚರಿ ಹಾಗೂ ಆಘಾತಕಾರಿಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಭಿಪ್ರಾಯಪಟ್ಟರು.

ಅವರು ಶನಿವಾರ ಕಾಪು ಬ್ಲಾಕ್ ಕಾಂಗ್ರೆಸ್ ಕಛೇರಿ "ರಾಜೀವ್ ಭವನ"ದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣಾ ಕಾರ್ಯದಲ್ಲಿ ಅವಿರತ ಶ್ರಮಿಸಿದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ  ಹಮ್ಮಿಕೊಳ್ಳಲಾಗಿದ್ದ "ಕೃತಜ್ಞತಾರ್ಪಣಾ ಸಭೆ"ಯಲ್ಲಿ ಭಾಗವಹಿಸಿ ಮಾತನಾಡಿದರು. 

ಚುನಾವಣಾ ಕಾರ್ಯದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ನಿಷ್ಠೆ ಮತ್ತು ಅಭಿಮಾನದಿಂದ ಅವಿರತ ಶ್ರಮವಹಿಸಿ ದ್ದಾರೆ, ಆದರೆ ಮತದಾರರ ಮನ ಮುಟ್ಟುವಲ್ಲಿ ಸಂಪೂರ್ಣ ಯಶಸ್ಸು ಕಾಣಲು ವಿಫಲರಾಗಿರುವುದು ಹಾಗೂ ಪ್ರತಿಸ್ಪರ್ಧಿ ಅಭ್ಯರ್ಥಿಗಳಿಂದ ನಡೆದ ವ್ಯವಸ್ಥಿತ ಅಪಪ್ರಚಾರ ಹಾಗೂ ಹಣಬಲದ ಮುಂದೆ ನಮ್ಮ ಪ್ರಾಮಾಣಿಕ ಜನಸೇವೆ ಮಂಕಾಗಿ ಹೋಯಿತು. ಕಾಪು ಕ್ಷೇತ್ರದಲ್ಲಿ ನಮಗೆ ಸೋಲಾಗಿರಬಹುದು, ಆದರೆ ರಾಜ್ಯದ ಸರ್ಕಾರ ಕಾಂಗ್ರೆಸ್ ನದ್ದಾಗಿದೆ, ಹಾಗಾಗಿ ಅದರ ಪ್ರಯೋಜನವನ್ನು ಪಡೆದು ಅಭಿವೃದ್ಧಿಯ ದೃಷ್ಟಿಕೋಣ ದೊಂದಿಗೆ ಮುಂದೆ ಸಾಗೋಣ. ಸರ್ಕಾರದ ಸವಲತ್ತುಗಳನ್ನು ಮತ್ತು ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಯತ್ನಿಸೋಣ ಈ ಮೂಲಕ ಮುಂಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಹಾಗೂ 2024ರ ಲೋಕಸಭಾ ಚುನಾವಣೆಗೆ ಸಜ್ಜಾಗೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.

ಸೋಲಾಯಿತೆಂದು ಕಾರ್ಯಕರ್ತರು ಯಾರೂ ವಿಚಲಿತರಾಗದೆ ಯಾವುದೇ ಸಂದರ್ಭದಲ್ಲಿಯೂ ಎದೆ ಗುಂದಬೇಡಿ, ನಾನಂತೂ ನಿಮ್ಮೊಂದಿಗೆ ಈ ಹಿಂದೆ ಯಾವ ರೀತಿಯಲ್ಲಿ ನಿಮಗೆ ಸಹಕರಿಸಿ, ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬೆಂಬಲಿಸುತ್ತಿದ್ದೇನೋ ಇನ್ನು ಅದಕ್ಕಿಂತಲೂ ಒಂದು ಪಟ್ಟು ಹೆಚ್ಚಾಗಿ ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ಅಭಯ ನೀಡಿದರು.

ಬಾವುಕರಾದ ಸೊರಕೆ

ನಿಮ್ಮ ಸಹಕಾರ, ನನ್ನ ಮೇಲೆ ನೀವು ಇಟ್ಟಿರುವ ಪ್ರೀತಿ, ಅಭಿಮಾನಕ್ಕೆ ನಾನು ಸದಾ ಚಿರಋಣಿ. ಪಕ್ಷದ ಕಾರ್ಯಕರ್ತರ ಜೊತೆಗೆ ನನಗಿರುವ ಅವಿನಾಭಾವ ಸಂಬಂಧವನ್ನು ನಾನು ಯಾವತ್ತಿಗೂ ಕಡಿದು ಕೊಳ್ಳುವುದಿಲ್ಲ. ಕಾರ್ಯಕರ್ತರ ಪ್ರೀತಿ-ಅಭಿಮಾನವೇ ನಾನು ರಾಜಕೀಯದಲ್ಲಿ ಸಂಪಾದಿಸಿರುವ ಬಹುದೊಡ್ಡ ಆಸ್ತಿ ಎಂದು ಭಾವುಕರಾಗುಗಿ ನುಡಿದರು. ಈ ವೇಳೆ ನೆರೆದಿದ್ದ  ಕಾರ್ಯಕರ್ತರು ಕೂಡ ಭಾವುಕರಾದರು. 

ಸಭೆಯಲ್ಲಿ, ಕಾರ್ಯಕರ್ತರಿಗೆ ಅಭಿಪ್ರಾಯ ಹಂಚಿಕೆಗೆ ಹಾಗೂ ಸಲಹೆ-ಸೂಚನೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿತ್ತು. 

ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ ಎಸ್. ಸುವರ್ಣ ವಹಿಸಿ ಮಾತ ನಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ರಾಜ್‍ಶೇಖರ್ ಕೋಟ್ಯಾನ್, ಕೆಪಿಸಿಸಿ ಸಂಯೋ ಜಕರಾದ ನವೀನ್ ಚಂದ್ರ ಜೆ.ಶೆಟ್ಟಿಯವರು ಚುನಾವಣಾ ಕಾರ್ಯನಿರ್ವಹಣೆಯ ಪರಾಮರ್ಶೆ ನಡೆಸಿದರು.

ರಾಜ್ಯ ಹಿಂದುಳಿದ ವರ್ಗ ಘಟಕಗಳ ಸಮಿತಿಯ ಕಾರ್ಯದರ್ಶಿ ಶಿವಾಜಿ ಸುವರ್ಣ ಬೆಳ್ಳೆ,  ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ಬಲ್ಲಾಳ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ವಿಕ್ರಂ ಕಾಪು, ಜಿಲ್ಲಾ ಅನಿವಾಸಿ ಭಾರತೀಯ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ವಹಿದ್ ಶೇಖ್, ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಜಿತೇಂದ್ರ ಫುರ್ಟಾಡೋ, ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಾಂತಲತಾ ಎಸ್. ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ದೀಪಕ್ ಎರ್ಮಾಳ್, ಮೊಹಮ್ಮದ್ ಸಾದಿಕ್, ಪ್ರಶಾಂತ್ ಜತ್ತನ್ನ, ಸರಸು ಡಿ.ಬಂಗೇರ, ಪ್ರಭಾ ಬಿ.ಶೆಟ್ಟಿ,  ವೈ.ಸುಧೀರ್, ಹಸನಬ್ಬ ಶೇಖ್, ರತನ್ ಶೆಟ್ಟಿ, ಕಿಶೋರ್ ಅಂಬಾಡಿ, ಇಂದಿರಾ ಆಚಾರ್ಯ, ಸಿಮ್ಮಿ ಡಿಸೋಜ, ಯು.ಸಿ.ಶೇಕಬ್ಬ, ಆಶಾ ಅಂಚನ್ ಕಟಪಾಡಿ, ಸುನಿಲ್ ಡಿ.ಬಂಗೇರ, ಎಚ್.ಅಬ್ದುಲ್ಲಾ, ಅಬ್ದುಲ್ ಹಮೀದ್ ಮೂಳೂರು, ದಿವಾಕರ್ ಡಿ.ಶೆಟ್ಟಿ, ರಾಜೇಶ್ ಕುಲಾಲ್,  ಫರ್ಜಾನ ಸಂಜಯ್, ಶೋಭಾ ಬಂಗೇರ, ರಾಧಿಕಾ ಸುವರ್ಣ, ವಿದ್ಯಾಲತಾ ಆನಂದ್, ಸತೀಶ್ ಚಂದ್ರ ಮೂಳೂರು, ಶ್ರೀಕರ್ ಅಂಚನ್, ಮಹೇಶ್ ಪೂಜಾರಿ ಕಟಪಾಡಿ, ಕೆ.ಎಚ್.ಉಸ್ಮಾನ್, ಹಮೀದ್ ಯೂಸುಫ್, ಶೇಖರ್ ಹೆಜಮಾಡಿ, ಕೇಶವ ಸಾಲ್ಯಾನ್, ಗಣೇಶ್ ಕೋಟ್ಯಾನ್, ಜ್ಯೋತಿ ಮೆನನ್,  ಸುಧೀರ್ ಕರ್ಕೇರ, ಮೊಹಮ್ಮದ್ ನಯಿಮ್, ಯಶವಂತ ಫಲಿಮಾರು, ಗೋಪಾಲ್ ಪೂಜಾರಿ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಮೀರ್ ಮೊಹಮ್ಮದ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ದಿನೇಶ್ ಕೋಟ್ಯಾನ್ ಫಲಿಮಾರು ವಂದಿಸಿದರು. 

share
Next Story
X