ಪ್ರವೀಣ್ ನೆಟ್ಟಾರು ಪತ್ನಿ ಮರು ನೇಮಕಕ್ಕೆ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 27: ‘ಹೊಸ ಸರಕಾರ ಬಂದ ನಂತರ ಹಿಂದಿನ ಸರಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.
ಶನಿವಾರ ಟ್ವೀಟ್ ಮಾಡಿರುವ ಅವರು, ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ, ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರಕಾರದ ಯಾವುದೇ ಹಸ್ತಕ್ಷೇಪವಿಲ್ಲ’ ಎಂದು ವಿವರಣೆ ನೀಡಿದ್ದಾರೆ.
‘ಪ್ರವೀಣ್ ನೆಟ್ಟಾರು ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು’ ಎಂದು ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
— Siddaramaiah (@siddaramaiah) May 27, 2023
ಇದನ್ನು… pic.twitter.com/Y3hz7EVTVi