ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕದಂತೆ ಪ್ರಧಾನಿ ಮೋದಿ ನೆರವೇರಿಸಿದ್ದಾರೆ: ರಾಹುಲ್ ಗಾಂಧಿ ಟೀಕೆ
ಹೊಸ ದಿಲ್ಲಿ: ಸಂಸತ್ ಭವನವು ಜನರ ಧ್ವನಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮಾತ್ರ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕ ಕಾರ್ಯಕ್ರಮದಂತೆ ನೆರವೇರಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ ಎಂದು timesofindia.com ವರದಿ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟಿಸಿದ ಬೆನ್ನಿಗೇ ರಾಹುಲ್ ಗಾಂಧಿ ಮೇಲಿನಂತೆ ದಾಳಿ ನಡೆಸಿದ್ದಾರೆ.
ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಸಂಸತ್ ಭವನ ಜನರ ಧ್ವನಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮಾತ್ರ ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪಟ್ಟಾಭಿಷೇಕ ಕಾರ್ಯಕ್ರಮದಂತೆ ನೆರವೇರಿಸಿದ್ದಾರೆ" ಎಂದು ಟೀಕಿಸಿದ್ದಾರೆ.
ಎಐಸಿಸಿ ಪ್ರಧಾನ ಸಂಘಟನಾ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡಾ ಈ ಕುರಿತು ಟ್ವೀಟ್ ಮಾಡಿದ್ದು, "ನೂತನ ಸಂಸತ್ ಭವನಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಅಂದಿನ ರಾಷ್ಟ್ರಪತಿ ರಮಾನಂದ ಕೋವಿಂದ್ ಅವರನ್ನು ಕಾರ್ಯಕ್ರಮದಿಂದ ಹೊರಗಿಡಲಾಗಿತ್ತು. ಇದೀಗ ಉದ್ಘಾಟನಾ ಕಾರ್ಯಕ್ರಮದಿಂದ ಈಗಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹೊರಗಿಡಲಾಗಿದೆ" ಎಂದು ಟೀಕಿಸಿದ್ದಾರೆ.