Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ನಮ್ಮ...

ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ನಮ್ಮ ಸರ್ಕಾರದ ಆದ್ಯತೆ: ಡಿಸಿಎಂ ಡಿಕೆಶಿ

28 May 2023 2:42 PM IST
share
ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ನಮ್ಮ ಸರ್ಕಾರದ ಆದ್ಯತೆ: ಡಿಸಿಎಂ ಡಿಕೆಶಿ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವುದಾಗಿ ಜನರಿಗೆ ಮಾತು ನೀಡಿದ್ದೇವೆ.ಅರ್ಹರನ್ನು ಪಾರದರ್ಶಕವಾಗಿ ನೇಮಕ ಮಾಡಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಸರ್ಕಾರದ ಇಲಾಖೆಗಳಲ್ಲಿ ಇರುವ ಖಾಲಿ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲಾಗುವುದು. ಪಾರದರ್ಶಕ ಪ್ರಕ್ರಿಯೆ ಮೂಲಕ ಮಾಡಲಾಗುವುದು. ಹೀಗಾಗಿ ಇದು ಒಂದೆರಡು ದಿನಗಳಲ್ಲಿ ಆಗುವುದಿಲ್ಲ, ಇದಕ್ಕೆ ಸಮಯ ಬೇಕಾಗಲಿದೆ ಎಂದರು.

ವಿದ್ಯುತ್ ಬಿಲ್ ಹಾಗೂ ಬಸ್ ಟಿಕೆಟ್ ಹಣ ಪಾವತಿಸಬೇಡಿ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ' ಅವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಹೀಗಾಗಿ ಅವರು ಜನರನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಮೊದಲು ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕಲಿ. 1ಲಕ್ಷದ  ವರೆಗಿನ ರೈತರ ಸಾಲ ಮನ್ನಾ ಸೇರಿ ಬಿಜೆಪಿಯು ಅನೇಕ ಭರವಸೆಗಳನ್ನು ಪ್ರಣಾಳಿಕೆ ನೀಡಿತ್ತು. ಆದರೆ ಮಾಡಲಿಲ್ಲ. ಕಾಂಗ್ರೆಸ್ ಪಕ್ಷದ ನಾವು ಬಸವಣ್ಣ ಹಾಗೂ ಕುವೆಂಪು ಅವರ ನಾಡಿನವರು.  ಪಕ್ಷ ಕೊಟ್ಟ ಮಾತಿಗೆ ಬದ್ಧವಾಗಿದ್ದು, ನುಡಿದಂತೆ ನಡೆಯುತ್ತೇವೆ. ನಮ್ಮ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ' ಎಂದು ತಿಳಿಸಿದರು.

ನೆಟ್ಟಾರು ಅವರ ಪತ್ನಿ ಉದ್ಯೋಗ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ' ಬಿಜೆಪಿಯವರು ಏನಾದರೂ ಮಾತನಾಡಲಿ, ನಾನು ಅದಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ಮುಖ್ಯಮಂತ್ರಿಗಳು ಈ ವಿಚಾರವಾಗಿ ತೀರ್ಮಾನ ಮಾಡಿದ್ದಾರೆ. ಬಿಜೆಪಿಯವರು ಆತುರದಿಂದ ರಾಜಕೀಯ ಮಾಡಲು ಬಯಸಿದರೆ ನಾವು ಸಮಾಜದ ಶಾಂತಿ, ಸೌಹಾರ್ದತೆ ಹಾಗೂ ಅಭಿವೃದ್ಧಿ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ ' ಎಂದು ತಿಳಿಸಿದರು.

share
Next Story
X