ಕುತ್ಯಾರು: ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ

ಶಿರ್ವ, ಮೇ 28: ಕುತ್ಯಾರು ಸಾಯಿ ಕ್ರಿಯೇಷನ್ ಸಂಸ್ಥೆಯ ಪ್ರಾಯೋಜಕತ್ವ ದಲ್ಲಿ ಕುತ್ಯಾರು ವಿದ್ಯಾದಾಯಿನಿ ಶಾಲೆಯಲ್ಲಿ ಶನಿವಾರ ಆಯೋಜಿಸಲಾದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಪಂ ಅಧ್ಯಕ್ಷೆ ಲತಾ ಆಚಾರ್ಯ, ಸಾಯಿ ಕ್ರಿಯೇಷನ್ ಪ್ರವರ್ತಕ ಸಾಯಿನಾಥ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಶರ್ಮಿಳಾ, ಸ್ಥಳೀಯ ಪ್ರಮುಖರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಪ್ರಸಾದ್ ಕುತ್ಯಾರು ಮೊದಲಾದವರು ಉಪಸ್ಥಿತರಿದ್ದರು. ಸುಮಾರು 198 ಪಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡರು.
Next Story