ಕೆ.ಆರ್.ಸರ್ಕಲ್ ಕೆಳಸೇತುವೆಯಲ್ಲಿ ಯುವತಿ ಸಾವು ಪ್ರಕರಣ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಲೋಕಾಯುಕ್ತ
ಬೆಂಗಳೂರು, ಮೇ 28: ಕೆ.ಆರ್.ಸರ್ಕಲ್ ಕೆಳ ಸೇತುವೆಯಲ್ಲಿ ಮಳೆ ನೀರು ತುಂಬಿಕೊಂಡು ಯುವತಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.
ಅವಘಡದ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನ ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೂ, ಅವಘಡಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಸ್ಥೆಯ ಪೊಲೀಸ್ ವಿಭಾಗಕ್ಕೆ ಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ. ಇತ್ತೀಚಿಗೆ ನಗರದಲ್ಲಿ ಸುರಿದ ಭಾರಿ ಮಳೆಗೆ ಕೆಆರ್ ಸರ್ಕಲ್ ಕೆಳಸೇತುವೆಯಲ್ಲಿ ಕಾರು ಮುಳುಗಿದ ಪರಿಣಾಮ ಭಾನುರೇಖಾ ಸಾವನ್ನಪ್ಪಿದ್ದರು.
Next Story