Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ...

ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ, ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ: ನೂತನ ಸಚಿವರಿಗೆ ಸಿದ್ದರಾಮಯ್ಯ ಸೂಚನೆ

28 May 2023 6:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ, ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ: ನೂತನ ಸಚಿವರಿಗೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ 28: ‘ಕೇಂದ್ರ ಸರಕಾರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ನೂತನ ಸಚಿವರಿಗೆ ಗುರಿ (ಟಾರ್ಗೆಟ್) ನೀಡಿದ್ದಾರೆ.

ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗಿ 15 ದಿನಗಳ ಒಳಗೆ ಪೂರ್ಣ ಪ್ರಮಾಣದ ಸರಕಾರ ಅಸ್ತಿತ್ವಕ್ಕೆ ಬಂದಿದ್ದು, ನೂತನ ಸಚಿವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಜೊತೆಗೆ ಕನಿಷ್ಟ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವು ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಸೂಚನೆ ನೀಡಿದ್ದಾರೆಂದು ಗೊತ್ತಾಗಿದೆ.

‘ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ-ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ’ ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

‘ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲ್ಲ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ.

‘ನಾವು ನೀಡಿರುವ ಐದು ಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು. 

ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಿ. ವಿಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈಹಿಡಿದಿದ್ದಾರೆ. ಈಗ ನಾವು ಸರಕಾರವನ್ನು, ಸರಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಅವರು ಸೂಚಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X