ಕುತೂಹಲ ಮೂಡಿಸಿದ ವೈಎಸ್ ಶರ್ಮಿಳಾ- ಡಿ.ಕೆ ಶಿವಕುಮಾರ್ ಭೇಟಿ
ಬೆಂಗಳೂರು: ತೆಲಂಗಾಣ ವೈ.ಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈಎಸ್ ಶರ್ಮಿಳಾ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ಭಾರೀ ಕುತೂಹಲ ಮೂಡಿಸಿದೆ.
ಸೋಮವಾರ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ವೈಎಸ್ ಶರ್ಮಿಳಾ ಡಿ.ಕೆ ಶಿವಕುಮಾರ್ ಅವರ ಜೊತೆ ಕೆಲ ಕಾಲ ಮಾತುಕತೆ ನಡೆಸಿದ್ದಾರೆ.
ಇನ್ನು ಇದೇ ವರ್ಷ ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
Next Story