Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಜಾಬ್ ಮತ್ತು ಕುಸ್ತಿ ಅಖಾಡದಲ್ಲಿ...

ಹಿಜಾಬ್ ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿಗಳ ಮಸಲತ್ತು...: ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ನಟ ಕಿಶೋರ್ ಪೋಸ್ಟ್

''ಹೆಮ್ಮೆಯ ಹೆಣ್ಣು ಮಕ್ಕಳನ್ನು ಜೈಲಿಗೆ ತಳ್ಳಿ ಪಟ್ಟಾಭಿಷೇಕ ಮಾಡಿಕೊಳ್ಳುತ್ತಿರುವ ರಾಜ''

29 May 2023 2:12 PM IST
share
ಹಿಜಾಬ್ ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿಗಳ ಮಸಲತ್ತು...: ಕುಸ್ತಿಪಟುಗಳ ಹೋರಾಟ ಬೆಂಬಲಿಸಿ ನಟ ಕಿಶೋರ್ ಪೋಸ್ಟ್
''ಹೆಮ್ಮೆಯ ಹೆಣ್ಣು ಮಕ್ಕಳನ್ನು ಜೈಲಿಗೆ ತಳ್ಳಿ ಪಟ್ಟಾಭಿಷೇಕ ಮಾಡಿಕೊಳ್ಳುತ್ತಿರುವ ರಾಜ''

ಬೆಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ, ಭಾರತೀಯ ಕುಸ್ತಿ ಫೆಡರೇಷನ್‌ ಮುಖ್ಯಸ್ಥ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಶರಣ್‌ನನ್ನು ಬಂಧಿಸಬೇಕೆಂದು ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳ ವಿರುದ್ಧ ದೆಹಲಿ ಪೊಲೀಸರ ಕ್ರಮಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ನಟ ಕಿಶೋರ್, ಹಿಜಾಬ್  ಹೋರಾಟ ಮತ್ತು ದೆಹಲಿಯಲ್ಲಿ ಕುಸ್ತಿಪಟುಗಳು ನಡೆಸುತ್ತಿರುವ ಹೋರಾಟದ ಬಗ್ಗೆ ತಮ್ಮದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ.

ಕಿಶೋರ್ ಅವರ ಪೋಸ್ಟ್ ನಲ್ಲೇನಿದೆ? 

''ಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು''

''ಭಯದ ಮತ್ತು ಬಹುಸಂಖ್ಯಾವಾದಿ ರಾಜಕಾರಣ''

''ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಬಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ ಶಿಕ್ಷಿತಳೂ ಸಶಕ್ತಳೂ ಆಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ ಅವಳಲ್ಲಿ ಭಯ ಹುಟ್ಟಿಸಿ, ಆಕೆ ತನ್ನ ಆತ್ಮರಕ್ಷಣೆಗಾಗಿ ತನ್ನ ಅಸ್ಮಿತೆಯ ಹುಡುಕಾಟದಲ್ಲಿ ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು''

''ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ ಹದಿನಾಲ್ಕು ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ, ಇಂಥಾ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ .. ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ''  

''ತನ್ನ ಮನೆ, ಸಂಬಂಧಿಕರು, ಮತ, ಸಂಪ್ರದಾಯವಾದ ಎಲ್ಲವನ್ನೂ ದಾಟಿಬಂದು ಕೊನೆಯ ಹಂತದಲ್ಲಿ ಶಿಕ್ಷಣ ವಂಚಿತಳಾಗುವುದಕ್ಕೆ ಕಾರಣ ಕೂಡ ಸ್ವಯಂ ಅವಳೇ ಆಗಿಬಿಟ್ಟರೆ?? ದೇಶದ ಮುಖ್ಯವಾಹಿನಿಯಿಂದ ಮುಸ್ಲಿಂ ಮಹಿಳೆ ಮತ್ತು ಜನಾಂಗ ಎರಡೂ ಹೊರಗೆ… ಅದೂ ತನ್ನ ಕಾಲ ಮೇಲೆ ತಾನೇ ಕೊಡಲಿ ಹಾಕಿಕೊಂಡು.. ಇದಲ್ಲವೇ ಮಾಸ್ಟರ್ ಸ್ಟ್ರೊಕ್''

''ಜಂತರ್ ಮಂತರ್ ನಲ್ಲಿ  ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ…. ಆಗ ಹೊರಟದ್ದು …. ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರಿಗಾದರೆ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ…ಇಷ್ಟು ಸಾಲದೇ, ಶತಮಾನಗಳು ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು''

''ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ. ಜೈ ಭಾರತಾಂಬೆ'' ಎಂದು ಕಿಶೋರ್ ಬರೆದುಕೊಂಡಿದ್ದಾರೆ. 

''ದೇಶದ ಹೆಮ್ಮೆಯ ಹೆಣ್ಣು ಮಕ್ಕಳನ್ನು ಜೈಲಿಗೆ ತಳ್ಳಿ ಪಟ್ಟಾಭಿಷೇಕ ಮಾಡಿಕೊಳ್ಳುತ್ತಿರುವ ಈ ದೇಶದ ಹೊಸ ರಾಜ ನರೇಂದ್ರ ಮೋದಿಗೆ ಬಹುಪರಾಕ್ ಬಹುಪರಾಕ್'' ಎಂದು ಕಿಶೋರ್ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. 

share
Next Story
X