ಬಿಬಿಎಂಪಿ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸಭೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸಂಬಂಧಿಸಿದ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು.
ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಸೇರಿದಂತೆ ಹಲವು ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ ಶಿವಕುಮಾರ್, ''ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ. ಮುಖ್ಯಮಂತ್ರಿಗಳು ಹಣಕಾಸು ಸಚಿವಾಲಯ ಜವಾಬ್ದಾರಿ ಹೊತ್ತಿದ್ದಾರೆ. ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ'' ಎಂದು ತಿಳಿಸಿದರು.



Next Story