Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ | ನಾಪತ್ತೆಯಾಗಿದ್ದ ಚಾರಣಿಗನ...

ಬೆಳ್ತಂಗಡಿ | ನಾಪತ್ತೆಯಾಗಿದ್ದ ಚಾರಣಿಗನ ರಕ್ಷಣೆ; ರೋಚಕ ಕಾರ್ಯಾಚರಣೆ ಹೇಗಿತ್ತು?

29 May 2023 4:15 PM IST
share
ಬೆಳ್ತಂಗಡಿ | ನಾಪತ್ತೆಯಾಗಿದ್ದ ಚಾರಣಿಗನ ರಕ್ಷಣೆ; ರೋಚಕ ಕಾರ್ಯಾಚರಣೆ ಹೇಗಿತ್ತು?

ಬೆಳ್ತಂಗಡಿ:  ದ.ಕ ಮತ್ತು ಚಿಕ್ಕಮಗಳೂರು ಜಿಲ್ಲಾ ಗಡಿ ಪ್ರದೇಶದ ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಬಂದಿಳಿದಿದ್ದ‌ ಮಹಾರಾಷ್ಟ್ರದ ನಾಗಪುರ ನಿವಾಸಿ,  ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಅವರನ್ನು ಆಹೋರಾತ್ರಿ ಕಾರ್ಯಾಚರಣೆಯ ಬಳಿಕ ಸ್ಥಳೀಯರ ತಂಡ ಪತ್ತೆಹಚ್ಚಿದ್ದು ಸುರಕ್ಷಿತವಾಗಿ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿಝರಿ ಫಾಲ್ಸ್ ಕಡೆಯಿಂದ ಬಂಡಾಜೆ ಎರ್ಮಾಯಿ ಫಾಲ್ಸ್ ಅರಣ್ಯದ ಕಡೆಗೆ ಇಳಿದು, ರಾತ್ರಿಯಾಗುತ್ತಿದ್ದಂತೆ ಹಸಿವಿನಿಂದ ನಿತ್ರಾಣಕ್ಕೊಳಗಾಗಿ ದಾರಿ ಕಾಣದೆ ಅರಣ್ಯದಲ್ಲಿ ಬಾಕಿಯಾಗಿದ್ದ ಟೆಕ್ಕಿ. ದಾರಿ ಕಾಣದೆ ಬೆಂಗಳೂರಿನ‌ ಸಹೋದ್ಯೋಗಳಿಗೆ ತಾನಿರುವ ಲೊಕೇಶನ್ ಕಳಿಸಿದ್ದ. ಅವರು ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದಲ್ಲದೆ ಆ ಸಂದೇಶವನ್ನು ಬೆಂಗಳೂರಿನ ಗ್ರೂಪಿನಲ್ಲಿ‌ ಹಂಚಿಕೊಂಡಿದ್ದರು. ಅದು ಸಂಜೆ ವೇಳೆಗೆ ಚಾರ್ಮಾಡಿಯ ಹೊಟೇಲ್ ಹನೀಫ್ ಅವರಿಗೆ ಗೊತ್ತಾಗಿ ಅವರು ಚಾರ್ಮಾಡಿಯ ಗ್ರೂಪಿಗೆ ಹಾಕಿದ್ದರು. ಇದನ್ನು ‌ನೋಡಿದ ಸಿನಾನ್ ಚಾರ್ಮಾಡಿ ಅವರು ಬಾಳೂರು ಪೊಲೀಸರು ಹಾಗೂ  ಬೆಳ್ತಂಗಡಿಯ ಅರಣ್ಯ ಇಲಾಖೆಯವರ ಸಹಕಾರದೊಂದಿಗೆ  ಚಾರ್ಮಾಡಿ  ವ್ಯಾಪ್ತಿಯ ಸ್ಥಳೀಯರಾದ ಮುಬಶ್ಶಿರ್,  ಕಾಜೂರಿನ ಎರ್ಮಾಲ್‌ ಪಲ್ಕೆ,ಅಶ್ರಫ್, ಕಾಜೂರಿನ ಶಂಸು, ನಾಸೀರ್ ಇವರ ತಂಡ ಸೇರಿ ಹುಡುಕಾಟ ಕಾರ್ಯಾಚರಣೆ ನಡೆಸಿದರು.

ಇತ್ತ ಸುಧೀರ್ ವಳಂಬ್ರ, ಜನಾರ್ದನ, ಪೊಲೀಸ್ ಇಲಾಖೆಯ ಶಶಿಧರ, ಆಸಿಫ್ ಸೋಮಂತಡ್ಕ, ಜೀವರಕ್ಷಕ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಇವರುಗಳು ಸೇರಿ ಪತ್ತೆಗೆ ಸಾಥ್ ಕೊಟ್ಟಿದ್ದಾರೆ.

ರಾತ್ರಿಯಿಡೀ ಕಾರ್ಯಾಚರಣೆ:

ಸಿನಾನ್ ಚಾರ್ಮಾಡಿ ನೇತೃತ್ವದ ಒಂದು ತಂಡ ಮತ್ತು ಜಲೀಲ್, ಶಿಶಧರ ಅವರ ನೇತೃತ್ವದ ಎರಡು ತಂಡಗಳಾಗಿ ಪತ್ತೆ ಕಾರ್ಯಾಚರಣೆ ನಡೆದಿದೆ. ಸಂಜೆ 5 ಗಂಟೆಗೆ ಹೊರಟ ತಂಡ 12 ಗಂಟೆ ರಾತ್ರಿಗೆ ದಟ್ಟ ಅರಣ್ಯದಲ್ಲಿ ಆತ ನನ್ನು ಪತ್ತೆ ಹಚ್ಚಿದೆ. ಆವರಿಸಿದ ಕತ್ತಲೆ, ಜಾರುವ ಬಂಡೆಕಲ್ಲುಗಳ ಅಪಾಯಕಾರಿ  ಇಳಿಜಾರು ಪ್ರದೇಶ, ಇಂಬಳಗಳ ತೀವ್ರ ಕಾಟ. ಇದರ ಮಧ್ಯೆ ಮರಗಳ ಮೇಲೆ ಹತ್ತಿಕೊಂಡು ಸಾಹಸಮಯವಾಗಿ ತಂಡ ಅಲ್ಲಿ ತಲುಪುವಷ್ಟರಲ್ಲಿ ಟೆಕ್ಕಿ ಹಸಿವು,ಮತ್ತು ಭಯದಿಂದ ತತ್ತರಿಸಿ ತೀವ್ರ ಬಸವಳಿದು ಹೋಗಿದ್ದ. ಬಿಸ್ಕೆಟ್ ಮತ್ತು ಪಾನೀಯ ಕುಡಿಸಿ ಸ್ವಲ್ಪ ಸುಧಾರಿಸಿಕೊಂಡು ಅಲ್ಲಿಂದ ಆತನನ್ನು ಹೊತ್ತುಕೊಂಡು ಬೆಳಗ್ಗೆ 4.30 ರ ವೇಳೆಗೆ ಕಾಜೂರಿಗೆ ಕರೆತರಲಾಯಿತು. ತಂಡಕ್ಕೆ ಅಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಷ್ಟರಲ್ಲಿ ಎಲ್ಲರೂ ದೈಹಿಕವಾಗಿ ಸೋತುಹೋಗಿದ್ದರು.

ಟೆಕ್ಕಿ ಸಿಲುಕಿಕೊಂಡಿದ್ದ‌ ಪ್ರದೇಶ‌ದಲ್ಲಿ ಸಮರ್ಪಕ ನೆಟ್ವರ್ಕ್ ಕೂಡ ಇರಲಿಲ್ಲ.   ಆಗಾಗ ಅಲ್ಪ ಸ್ವಲ್ಪ ಸಂಪರ್ಕ ಬಳಸಿ ಕೊನೆಗೂ ಆತನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಎದುರಿಗೆ ಸಿಕ್ಕ  ಕಾಡಾನೆಯಿಂದ ತಂಡ ಪಾರು:

ಟೆಕ್ಕಿಯನ್ನು ಸುರಕ್ಷಿತವಾಗಿ ಕರೆತರುವ ಮಧ್ಯೆ  ಕಡಿರುದ್ಯಾವರ, ಮಿತ್ತಬಾಗಿಲು ಗ್ರಾಮದ ವ್ಯಾಪ್ತಿಗೆ ಬರುತ್ತಿದ್ದಂತೆ ಬೆಳಗ್ಗಿನ ಜಾವ 4 ಗಂಟೆಗೆ ಕಾಡಾನೆಯೊಂದು ತಂಡಕ್ಕೆ ಎದುರಾಯಿತು. ತಂಡದಲ್ಲಿದ್ದ ಜನಾರ್ದನ ಅವರಿಗೆ ಪೂರ್ವ ಮಾಹಿತಿ ಇದ್ದುದರಿಂದ ಸಂಭಾವ್ಯ ಅಪಾಯ ತಪ್ಪಿದೆ. ಇಳಿಜಾರಿಗೆ ಇಳಿದು  ಆನೆಯಿಂದ ರಕ್ಷಿಸಿಕೊಂಡೆವು ಎಂದು ತಂಡದಲ್ಲಿದ್ದ ಜಲೀಲ್ ಪ್ರತಿಕ್ರಿಯಿಸಿದ್ದಾರೆ.

ಆಂಬುಲೆನ್ಸ್ ಮೂಲಕ ಬಾಳುಪೇಟೆ ಠಾಣೆಗೆ ರವಾನೆ:

ಪತ್ತೆಯಾದ ಚಾರಣಿಗ ಟೆಕ್ಕಿಯನ್ನು ಜಲೀಲ್ ಅವರು ತಂಗಿದ್ದ ರೆಸಾರ್ಟ್‌ ನಲ್ಲಿ ಉಪಚರಿಸಿದ ಬಳಿಕ ಆಂಬುಲೆನ್ಸ್ ಮೂಲಕ ಬಾಳುಪೇಟೆ ಠಾಣೆಗೆ ಕರೆದೊಯ್ಯಲಾಯಿತು. ಒಬ್ಬಂಟಿಯಾಗಿ ಚಾರಣಕ್ಕೆ ಬಂದಿದ್ದ ಟೆಕ್ಕಿ ಬೆಳಗ್ಗೆ ತಿಂಡಿ ತಿಂದು ಕಾಡಿನ ಕಡೆಗೆ ಬಂದಿದ್ದ. ಕೆಳಗೆ ಇಳಿದವನಿಗೆ ಮತ್ತೆ ಮೇಲೆ ಹೋಗಲು ದಾರಿ ಗೊತ್ತಾಗಿರಲಿಲ್ಲ  ಸಂಜೆಯಾಗುತ್ತಿದ್ದಂತೆಯೇ ಹಸಿವಿನಿಂದ ಬಳಲಿ ದಾರಿ ಕಾಣದೆ ತೊರೆಯ ನೀರು ಸೇವಿಸಿದ್ದ ಎಂದು ತಿಳಿದು ಬಂದಿದೆ.

share
Next Story
X