ಟಿ.ನರಸೀಪುರ ಬಳಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕಾರಿನಲ್ಲಿದ್ದ 10 ಮಂದಿ ಮೃತ್ಯು

ಬೆಂಗಳೂರು: ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ಸೋಮವಾರ ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು' ಎಂದು ತಿಳಿಸಿದ್ದಾರೆ.
''ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ'' ಎಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕುಷ್ಟಗಿ ಬಳಿ ಭೀಕರ ರಸ್ತೆ ಅಪಘಾತ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ.
— CM of Karnataka (@CMofKarnataka) May 29, 2023
ದುರ್ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ… pic.twitter.com/xSUD80kNro