ಸ್ಕೂಟರ್ ಢಿಕ್ಕಿ: ಪಾದಚಾರಿ ಮೃತ್ಯು, ಸವಾರರಿಗೆ ಗಾಯ

ಮಣಿಪಾಲ, ಮೇ 29: ಸ್ಕೂಟರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟು, ಸವಾರರಿಬ್ಬರು ಗಾಯಗೊಂಡ ಘಟನೆ ಮಣಿಪಾಲ ಲಕ್ಷ್ಮೀಂದ್ರ ನಗರದ ಝುಡಿಯೋ ಬಟ್ಟೆ ಅಂಗಡಿ ಬಳಿ ಮೇ 27ರಂದು ತಡರಾತ್ರಿ ನಡೆದಿದೆ.
ಸ್ಕೂಟರ್ ಸವಾರ ಪ್ರಭ್‌ಕಿರತ್ ಸಿಂಗ್ ಹಾಗೂ ಹಿಂಬದಿ ಸವಾರಿಣಿ ಕೀರ್ತಿ ಮಟನಿ ಎಂಬವರು ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿಯಿಂದ ಮಣಿಪಾಲ ಕಡೆಗೆ ಹೋಗುತ್ತಿದ್ದ ಸ್ಕೂಟರ್, ರಸ್ತೆ ದಾಟಲು ನಿಂತಿದ್ದ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಪಾದಚಾರಿ ಹಾಗೂ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಅಜ್ಜರಕಾಡು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 28ರಂದು ಬೆಳಗ್ಗೆ ಮೃತಪಟ್ಟರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story