Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ...

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಸಾಹಿತಿಗಳಿಗೆ ಮುಖ್ಯಮಂತ್ರಿಗಳು ಕೊಟ್ಟ ಭರವಸೆಗಳೇನು?

29 May 2023 9:54 PM IST
share
ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಸಾಹಿತಿಗಳಿಗೆ ಮುಖ್ಯಮಂತ್ರಿಗಳು ಕೊಟ್ಟ ಭರವಸೆಗಳೇನು?

ಬೆಂಗಳೂರು: ಮೇ 29: ‘ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹಿತಿಗಳಿಗೆ ಭರವಸೆ ನೀಡಿದ್ದಾರೆ.

ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ 40ಕ್ಕೂ ಹೆಚ್ಚು ಮಂದಿ ಹಿರಿಯ ಸಾಹಿತಿಗಳು, ಬರಹಗಾರರು ಹಾಗೂ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

‘ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

‘ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರಕಾರ ಕ್ರಮ ಕೈಗೊಳ್ಳಲಿದೆ’ ಎಂದು ಅವರು ತಿಳಿಸಿದರು.
 

share
Next Story
X