Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಸಂಘ ಪರಿವಾರ ಕಾರ್ಯಕರ್ತರ ವಿರುದ್ಧ...

ಸಂಘ ಪರಿವಾರ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 260 ಪ್ರಕರಣಗಳನ್ನು ಹಿಂಪಡೆದಿದ್ದ ಬಿಜೆಪಿ ಸರಕಾರ

ಮಧುಗಿರಿ ಮೋದಿ ಸಹಿತ 495 ಮಂದಿ ವಿರುದ್ಧದ ಮೊಕದ್ದಮೆ ಮೂರೇ ತಿಂಗಳಲ್ಲಿ ವಾಪಸ್

ಜಿ.ಮಹಾಂತೇಶ್ಜಿ.ಮಹಾಂತೇಶ್30 May 2023 10:55 AM IST
share
ಸಂಘ ಪರಿವಾರ ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ 260 ಪ್ರಕರಣಗಳನ್ನು ಹಿಂಪಡೆದಿದ್ದ ಬಿಜೆಪಿ ಸರಕಾರ
ಮಧುಗಿರಿ ಮೋದಿ ಸಹಿತ 495 ಮಂದಿ ವಿರುದ್ಧದ ಮೊಕದ್ದಮೆ ಮೂರೇ ತಿಂಗಳಲ್ಲಿ ವಾಪಸ್

ಬೆಂಗಳೂರು, ಮೇ 30: ಬಿಜೆಪಿ, ಎಬಿವಿಪಿ ಮತ್ತು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿದಂತೆ ಮತ್ತಿತರ 495ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ದಾಖಲಾಗಿದ್ದ ಒಟ್ಟು ಕ್ರಿಮಿನಲ್‌ ಪ್ರಕರಣಗಳ ಪೈಕಿ 260 ಪ್ರಕರಣಗಳನ್ನು 2023ರ ಜನವರಿಯಿಂದ 2023ರ ಮಾರ್ಚ್‌ ಅಂತ್ಯದವರೆಗಿನ ಕೇವಲ ಮೂರೇ ಮೂರು ತಿಂಗಳಲ್ಲಿ  ಹಿಂದಿನ ರಾಜ್ಯ ಬಿಜೆಪಿ ಸರ್ಕಾರವು ವಿಚಾರಣೆಯಿಂದಲೇ ಹಿಂಪಡೆದುಕೊಂಡಿರುವುದನ್ನು 'The-File' ಇದೀಗ ದಾಖಲೆ ಸಹಿತ ಹೊರಗೆಡಹುತ್ತಿದೆ.

ಕೋಮು ಪ್ರಚೋದನೆ, ಟಿಪ್ಪು ಜಯಂತಿ ಸಂದರ್ಭದಲ್ಲಿ ನಡೆದಿದ್ದ ಕೋಮು ಗಲಭೆ, ಸಾರ್ವಜನಿಕರ ನೆಮ್ಮದಿಗೆ ಭಂಗ, ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ, ಕೋವಿಡ್ ಸಂದರ್ಭ ಸುರಕ್ಷಿತ ಆಂತರ ಕಾಯ್ದುಕೊಳ್ಳದಿರುವುದು, ಲಾಕ್‌ಡೌನ್‌ ಸಂದರ್ಭದಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಉಲ್ಲಂಘನೆ ಸೇರಿದಂತೆ ಮತ್ತಿತರ ಗಂಭೀರ ಆರೋಪಗಳಡಿ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಐಪಿಸಿ, ಸಿಆರ್‌ಪಿಸಿ ಸೇರಿ ಮತ್ತಿತರ ದಂಡನಾ ಕಾಯ್ದೆಯಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದರೂ ಹಿಂಪಡೆದುಕೊಂಡಿದೆ.

ಈ ಎಲ್ಲ ಮೊಕದ್ದಮೆಗಳನ್ನು ವಿಚಾರಣೆಯಿಂದ ಹಿಂಪಡೆದುಕೊಳ್ಳಲು ಸಚಿವ ಸಂಪುಟ ಉಪ ಸಮಿತಿಯು ಶಿಫಾರಸು ಮಾಡಿತ್ತು. ಪ್ರಕರಣ, ಮೊಕದ್ದಮೆಗಳನ್ನು  ವಿಚಾರಣೆಯಿಂದ ಹಿಂಪಡೆದುಕೊಂಡಿರುವುದಕ್ಕೆ ಸಂಬಂಧಿಸಿದಂತೆ 'ದಿ ಫೈಲ್‌' ಆರ್‌ಟಿಐ ಅಡಿಯಲ್ಲಿ ಸರ್ಕಾರದ ಆದೇಶಗಳು ಮತ್ತು ಸಮಗ್ರ  ನಡವಳಿಗಳನ್ನು ಪಡೆದುಕೊಂಡಿದೆ.

ವಿಶೇಷವೆಂದರೆ ವಿಧಾನಸಭೆ ಚುನಾವಣೆ ಅಧಿಸೂಚನೆ ಪ್ರಕಟವಾಗುವ ಒಂದೆರಡು ದಿನ ಮುನ್ನವೇ 212 ಕ್ರಿಮಿನಲ್‌ ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂಪಡೆದುಕೊಂಡಿರುವುದು ಆರ್‌ಟಿಐ ದಾಖಲೆಗಳಿಂದ ತಿಳಿದುಬಂದಿದೆ.

ಟಿಪ್ಪು ಜಯಂತಿ, ಗಣೇಶ ವಿಸರ್ಜನೆ, ಜನರ ಭಾವನೆಗಳಿಗೆ ಧಕ್ಕೆ ತರುವ, ಕೋಮು ಸೌಹಾರ್ದ ಕದಡುವ ರೀತಿಯಲ್ಲಿ ಪ್ರಚೋದನಕಾರಿಯಾಗಿ ಮಾತನಾಡಿ ಅಪರಾಧ ಎಸಗಿರುವುದು, ಕಾನೂನುಬಾಹಿರವಾಗಿ ಅಕ್ರಮ ಕೂಟ ಕಟ್ಟಿಕೊಂಡು ಕಾನೂನು ಸುವ್ಯವಸ್ಥೆಗೆ ಭಂಗ ತಂದ ಅಪರಾಧ, ಮಸೀದಿ ಮೇಲೆ ಕಲ್ಲು ತೂರಾಟ ನಡೆಸಿರುವುದು, ಇದಕ್ಕೆ ಪ್ರತಿಯಾಗಿ ಬಿಜೆಪಿ ವಿಜಯೋತ್ಸವ ಆಚರಣೆ ವೇಳೆ ಕಲ್ಲು ತೂರಾಟ ನಡೆಸಿರುವುದು ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿಯುಂಟು ಮಾಡಿ ಕೋಮು ಸೌಹಾರ್ದ ಕದಡಿದ ಆರೋಪದ ಮೇಲೆ ಹಲವು ಪ್ರಕರಣಗಳು 2015, 2016, 2017, 2018, 2019, 2020 ಮತ್ತು 2021ರಲ್ಲಿ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಮೊಕದ್ದಮೆಗಳು ದಾಖಲಾಗಿದ್ದವು.

ಬೀದರ್‌, ಮಂಗಳೂರು ನಗರ, ಶಿವಮೊಗ್ಗ, ಧಾರವಾಡ, ಭಟ್ಕಳ, ಮಂಡ್ಯ, ಶಿರಸಿ, ದಾವಣಗೆರೆ, ತುಮಕೂರು, ಚಿತ್ತಾಪುರ, ಕಲಬುರಗಿ, ಹೊನ್ನಾಳಿ, ಹೊನ್ನಾವರ, ಜೇವರ್ಗಿ, ಯಾದಗಿರಿ, ಹಾವೇರಿ, ಕೊಪ್ಪಳ, ಮಂಗಳೂರಿನ ಕಂಕನಾಡಿ, ಕೊಪ್ಪಳ ನಗರ, ಗ್ರಾಮೀಣ, ಚಿತ್ರದುರ್ಗ, ಮೈಸೂರು, ಸಾಗರ, ಉಡುಪಿ, ಉತ್ತರ ಕನ್ನಡ, ಯಮಕನಮರಡಿ ಸೇರಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಕ್ರಿಮಿನಲ್‌ ಪ್ರಕರಣಗಳು ದಾಖಲಾಗಿದ್ದವು ಎಂಬುದು ಎಫ್‌ಐಆರ್‌ಗಳಿಂದ ತಿಳಿದು ಬಂದಿದೆ.

ತುಮಕೂರಿನಲ್ಲಿ ಗ್ಯಾರೇಜ್‌ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಮ್ ಸಮುದಾಯಕ್ಕೆ ಸೇರಿದವರ ಮೇಲೆ ಮಧುಗಿರಿ ಮೋದಿ ಎಂಬಾತ ಮತ್ತಿತರರು ಸೇರಿಕೊಂಡು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿ ಹೊಡೆದಿದ್ದರು. ಮಧುಗಿರಿ ಮೋದಿ ಮತ್ತಿತರರ ಮೇಲೆ 2021ರ ಅಕ್ಟೊಬರ್‌ 20ರಂದು ಎಫ್‌ಐಆರ್‌ (0142/2021) ದಾಖಲಾಗಿತ್ತು. ಸಚಿವ ಸಂಪುಟದ ಉಪ ಸಮಿತಿ ಶಿಫಾರಸಿನ್ವಯ ಪ್ರಕರಣವನ್ನೂ ಅಭಿಯೋಜನೆಯಿಂದ ಹಿಂಪಡೆದಿರುವುದು ಆರ್‌ಟಿಐ ದಾಖಲೆಯಿಂದ ಗೊತ್ತಾಗಿದೆ.

ಅದೇ ರೀತಿ ಟಿಪ್ಪು ಸುಲ್ತಾನರ ಭಾವಚಿತ್ರವನ್ನು ನಾಯಿ ಮುಖದ ರೀತಿಯಲ್ಲಿ ವಿರೂಪಗೊಳಿಸಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿ ಕೋಮು ಸೌಹಾರ್ದ ಕದಡಿದ್ದರಿಂದಾಗಿ ಮಂಡ್ಯದ ಬೆಳ್ಳೂರು ಗ್ರಾಮದಲ್ಲಿ ಕೋಮು ಗಲಭೆ ನಡೆಯುವಂತಹ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿದ್ದ ಆರೋಪದಲ್ಲಿ ಲೋಕೇಶ್‌ ಬಿ ವಿ ಸೇರಿದಂತೆ  5 ಮಂದಿ ಮೇಲೆ  ಐಟಿ ಕಾಯ್ದೆಯಡಿ 2017ರ ನವೆಂಬರ್‌ 7ರಂದು ದಾಖಲಾಗಿದ್ದ ಮೊಕದ್ದಮೆಯನ್ನೂ ಹಿಂಪಡೆದುಕೊಳ್ಳಲಾಗಿದೆ.

ಶೃಂಗೇರಿಯಲ್ಲಿ ಎಬಿವಿಪಿ ಕಾರ್ಯಕರ್ತ ಎಂದು ಹೇಳಲಾದ ಅಭಿಷೇಕ್‌ ಎಂಬಾತನ ಆತ್ಮಹತ್ಯೆ ಪ್ರಕರಣವನ್ನು ಮುಂದಿರಿಸಿಕೊಂಡು ಮಂಗಳೂರು ನಗರದ ಜಯೇಶ್‌, ಮಂಡ್ಯದ ತೇಜಸ್ವಿ, ಉಡುಪಿಯ ವಿಜೇತ, ಅನುಷ ಸೇರಿ ಒಟ್ಟು 14 ಮಂದಿ ವಿರುದ್ಧ ಮಂಗಳೂರಿನ ಬರ್ಕೆ ಪೊಲೀಸ್‌ ಠಾಣೆಯಲ್ಲಿ (0005/2017) ಐಪಿಸಿ 1860 ಸೇರಿದಂತೆ ಇನ್ನಿತರ ಕಲಂಗಳಡಿಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆಯಿಂದ ವಾಪಸ್‌ ಪಡೆದುಕೊಂಡಿರುವುದು ದಾಖಲೆಯಿಂದ ತಿಳಿದು ಬಂದಿದೆ.

ಮಂಡ್ಯದ ಕಾವೇರಿ ಟಿವಿ ವಾಹಿನಿಯ ಮೇಲೆ ಕೆಲವರು "ಹಿಂದೂಗಳಾದ ನಾವು ಹೇಳಿದಂತೆ ನೀವು ಕೇಳಬೇಕು, ಹಿಂದೂ ಸಂಘಟಕರು ಆಳ್ವಿಕೆ ಮಾಡುತ್ತಿದ್ದಾರೆ, ನಿಮ್ಮ ವಾಹಿನಿಯನ್ನು ಚಿಟಿಕೆ ಹೊಡೆಯುವುದರೊಳಗೆ ನಾವು ನಾಶಗೊಳಿಸುತ್ತೇವೆ, ಬುದ್ದಿಜೀವಿಗಳಿ ಬುದ್ಧಿ  ಕಲಿಸಿದಂತೆ ನಿಮಗೂ ಬುದ್ದಿ ಕಲಿಸುತ್ತೇವೆ. ಭಾರತದಲ್ಲಿ ಹಿಂದುಗಳ ಮಾತ್ರು ಇರಬೇಕು, ಇದು ಹಿಂದು ರಾಷ್ಟ್ರ, ಇವತ್ತು ಮುಸ್ಲಿಂ ನ್ಯೂಸ್‌ ಓದುತ್ತೀರಿ,  ನಾಳೆ ಕ್ರಿಶ್ಚಿಯನ್‌ ನ್ಯೂಸ್‌ ಓದುತ್ತಿರಿ, ನಾವು ಮಂಡ್ಯದ ಜನ ಏನ್‌ ಮಾಡಕ್ಕೂ ಹೆದರೋದಿಲ್ಲ" ಎಂದೆಲ್ಲಾ  ಬೆದರಿಕೆ ಒಡ್ಡಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ಮುರುಗೇಶ್‌ ಎಂಬುವರು ಸೇರಿದಂತೆ ಇನ್ನಿತರರ ವಿರುದ್ಧ ದಾಖಲಿಸಿಕೊಂಡಿದ್ದ ಪ್ರಕರಣವನ್ನೂ ವಿಚಾರಣೆಯಿಂದ ಹಿಂಪಡೆದುಕೊಂಡಿರುವುದು ಗೊತ್ತಾಗಿದೆ.

ಟಿಪ್ಪು ಜಯಂತಿ ಆಚರಣೆ ವಿರುದ್ಧ ಬಿಜೆಪಿ ಮತ್ತು ಸಂಘ ಪರಿವಾರದ ಸಂಘಟನೆಗಳ ಕಾರ್ಯಕರ್ತರಾದ ಕೆ.ಆರ್‌. ಪ್ರದೀಪ್‌, ಮುರುಳೀಧರನ್‌, ಗಿರೀಶ್‌, ಮಹದೇವಸ್ವಾಮಿ (ಬಿಜೆಪಿಯ ಯುವ ಮೋರ್ಚಾ ಗ್ರಾಮಾಂತರ) ಸೇರಿದಂತೆ ಮತ್ತಿತರರು ಸುಮಾರು 40-50 ಮಂದಿ ಅಕ್ರಮ ಕೂಟ ಕಟ್ಟಿಕೊಂಡು ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ  ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ 2016ರ ನವೆಂಬರ್‌ 7ರಂದು ಲಕ್ಷ್ಮೀಪುರಂ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಸಚಿವ ಸಂಪುಟ ಉಪ ಸಮಿತಿಯ ಶಿಫಾರಸಿನ್ವಯ ಈ ಪ್ರಕರಣವನ್ನೂ ವಿಚಾರಣೆಯಿಂದ ಹಿಂಪಡೆದುಕೊಂಡಿರುವುದು ಆರ್‌ಟಿಐ ದಾಖಲೆಯಿಂದ ತಿಳಿದು ಬಂದಿದೆ.

ಸಾರ್ವಜನಿಕ ಸಭೆ, ಸಮಾರಂಭ, ರ್ಯಾಲಿ, ಪ್ರತಿಭಟನೆ, ಮೆರವಣಿಗೆ ನಿಷೇದಿಸಿದ್ದರೂ ಮೈಸೂರು ಜಿಲ್ಲೆಯಿಂದ ಮಂಗಳೂರು ಚಲೋ ಬೈಕ್‌ ರ್ಯಾಲಿಯನ್ನು ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ವಿರುದ್ಧ ಟಿ ನರಸೀಪುರ ಠಾಣೆಯಲ್ಲಿ 2017ರ ಸೆಪ್ಟಂಬರ್‌ 6ರಂದು ಎಫ್‌ ಐ ಆರ್‌ ದಾಖಲಾಗಿತ್ತು. ಸಚಿವ ಸಂಪುಟ ಉಪ ಸಮಿತಿ ಶಿಫಾರಸಿನ ಅನ್ವಯ ಈ ಪ್ರಕರಣವನ್ನು ಅಭಿಯೋಜನೆಯಿಂದ ಹಿಂಪಡೆದುಕೊಂಡಿದೆ.

''ರಾಣೆಬೆನ್ನೂರನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಅಲ್ಲದೇ ತುಘಲಕ್‌ ಆಡಳಿತ ರಾಜ್ಯದಲ್ಲಿ ನಡೆಯುತ್ತಿದೆ. ಹಿಂದೂಗಳೆಲ್ಲ ಒಂದಾಗಬೇಕು, ಡಿಸೆಂಬರ್‌ 6ರಂದು ಮತಾಂಧ ನೊಂದ ಸಮುದಾಯ ಈ ವರ್ಷ ಕರಾಳ ಆಚರಣೆ ಮಾಡುತ್ತಿದ್ದು ನಾವು ಶೌರ್ಯ ದಿನವನ್ನು  ಆಚರಣೆ ಮಾಡಬಾರದು. ಹೊನ್ನಾವರದಲ್ಲಿ ಪರೇಶ್‌ ಮೇಸ್ತಾನನ್ನು ಹತ್ಯೆ ಮಾಡಲಾಗಿದೆ. ನಮ್ಮಲ್ಲಿ ಅಂತಹ ಘಟನೆ ಆಗಬಹುದು'' ಎಂದು ಕೋಮು ಭಾವನೆಗಳನ್ನು ಉದ್ರೇಕಿಸಿ, ಜಾತ್ಯತೀತತೆಗೆ ಧಕ್ಕೆ ತರುವ ರೀತಿಯಲ್ಲಿ, ಧರ್ಮ ಧರ್ಮದ ಮಧ್ಯೆ ಕೋಮು ಭಾವನೆಗಳನ್ನು ಉದ್ರೇಕಿಸಿ ಶಾಂತಿ ಸುವ್ಯವಸ್ಥೆಗೆ  ಧಕ್ಕೆ  ತರುವಂತೆ  ಮಾತಾಡಿದ ಅಪರಾಧದ ಮೇಲೆ ಅಜಯ ಗದಿಗೆಯ್ಯ ಸೇರಿದಂತೆ ಇತರರ ವಿರುದ್ಧ 2017ರ ಡಿಸೆಂಬರ್‌ 15ರಂದು ದಾಖಲಾಗಿದ್ದ ಪ್ರಕರಣವನ್ನೂ ಹಿಂಪಡೆದುಕೊಳ್ಳಲಾಗಿದೆ.

'ಪರವಾನಿಗೆ ಪಡೆದು ದನ ಮತ್ತು ಹೋರಿಗಳನ್ನು ಸಾಗಿಸುತ್ತಿದ್ದರೂ ದನಗಳನ್ನು ಮಾರಾಟಕ್ಕೆ ಕೊಂಡೊಯ್ಯುತ್ತಿರುವುದಾಗಿ ಆರೋಪಿಸಿ, ಹಣ ಕೊಡದಿದ್ದರೇ ವಾಹನಕ್ಕೆ ಬೆಂಕಿ ಹಚ್ಚುವುದಾಗಿ ಬೆದರಿಸಿದ ಆರೋಪದಲ್ಲಿ ಸಾಗರ ತಾಲೂಕಿನ ಪೊಲೀಸ್‌ ಠಾಣೆಯಲ್ಲಿ ಲಕ್ಷ್ಮಿನಾರಾಯಣ ಗಣಪತಿ ಎಂಬುವರು ಸೇರಿದಂತೆ ಒಟ್ಟು 7 ಮಂದಿ ವಿರುದ್ಧ 2018ರ ನವೆಂಬರ್‌ 25ರಂದು ದಾಖಲಾಗಿದ್ದ ಮೊಕದ್ದಮೆಯನ್ನು ವಾಪಸ್‌ ಪಡೆದುಕೊಂಡಿದೆ.

ಹೊನ್ನಾವರ ಪಟ್ಟಣದಲ್ಲಿ ನಡೆದ ಕೋಮು ಗಲಭೆಯಲ್ಲಿ ಮೃತಪಟ್ಟ ಪರೇಶ ಮೇಸ್ತಾ ಮತ್ತು ಆತನ ಸಾವಿನ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಬಂದ್‌ಗೆ ಕರೆನೀಡಿ ವಾಟ್ಸಾಪ್ ನಲ್ಲಿ ಪ್ರಚೋದನಾಕಾರಿ ಸಂದೇಶ ಹರಿಯಬಿಟ್ಟು ಶಿರಸಿಯಲ್ಲಿ ನಡೆದಿದ್ದ ಗಲಭೆಗೆ ಪ್ರಕರಣ ಸಂಬಂಧ 11 ಮಂದಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಿಂದಿನ ಸರ್ಕಾರವು ಹಿಂಪಡೆದುಕೊಂಡಿದೆ.

2017ರ ಡಿಸೆಂಬರ್‌ 12ರಂದು ಶಿರಸಿ ಬಂದ್‌  ಮಾಡಿದ್ದ ಸಂದರ್ಭದಲ್ಲಿ ಜಾಮಿಯಾ ಮಸೀದಿಯ ಹತ್ತಿರ ಹೋಗಿ "ಅವಾಚ್ಯವಾಗಿ ಬೈದು, ಮಸೀದಿ ಸುಡುತ್ತೇವೆ, ಮುಸಲ್ಮಾನರನ್ನು  ಜೀವಂತ ಬಿಡುವುದಿಲ್ಲ" ಎಂದು ಬೆದರಿಕೆ ಹಾಕಿದ್ದ ಸುಮಾರು 100ರಿಂದ 150ರಷ್ಟಿದ್ದ ಉದ್ರಿಕ್ತ ಗುಂಪು ಮಸೀದಿ ಬಾಗಿಲು, ಕಿಟಕಿಗಳಿಗೆ  ಸಿಸಿ ಕ್ಯಾಮರಾಕ್ಕೆ ಕಲ್ಲು ಹೊಡೆದು ಧ್ವಂಸ ಮಾಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಪ್ರಕರಣವನ್ನು ಹಿಂಪಡೆದಿರುವುದು ಆರ್‌ಟಿಐ ದಾಖಲೆಯಿಂದ ಗೊತ್ತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X