ಬೆಳಗಾವಿ: ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಅನಾಹುತ

ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ಮಂಗಳವಾರ ತುರ್ತು ಭೂಸ್ಪರ್ಶ ಮಾಡಿದ ಬಗ್ಗೆ ವರದಿಯಾಗಿದೆ.
ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿದ್ದ ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನ ಹೊನ್ನಿಹಾಳ ಹಾಗೂ ಬಾಗೇವಾಡಿ ಮಾರ್ಗ ಮಧ್ಯೆ ಇರುವ ಹೊಲದಲ್ಲಿ ಲ್ಯಾಂಡ್ ಆಗಿದೆ.
ಇದರಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ತರಬೇತುದಾರನ ಕಾಲಿಗೆ ಗಾಯವಾಗಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಾಂಬ್ರಾ ವಿಮಾನ ನಿಲ್ದಾಣದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸ್ಥಳಕ್ಕೆ ಮಾರೀಹಾಳ ಠಾಣೆ ಪೊಲೀಸರು, ವಾಯು ಸೇನೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story