ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ NIA ದಾಳಿ

ಮಂಗಳೂರು : ಬುಧವಾರ ಬೆಳ್ಳಂಬೆಳಿಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ಸಂಸ್ಥೆ (NIA) 16 ಕಡೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ ಎಂದು ತಿಳಿದು ಬಂದಿದೆ. ಹವಾಲಾ ಹಣಕ್ಕೆ ಸಂಬಂಧಿಸಿದ ಆರೋಪಗಳ ಬಗ್ಗೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ದೇಶದಲ್ಲಿ ಕೋಮು ಗಲಭೆ ಸೃಷ್ಠಿಸಲು ಯತ್ನ ಆರೋಪಗಳ ಹಿನ್ನೆಲೆ ಪ್ರಕರಣದ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ NIA ಅಧಿಕಾರಿಗಳು, ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದಿದ್ದರು.
Next Story