Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜೆಡಿಎಸ್ ಪಕ್ಷ ವಿಸರ್ಜನೆ ಯಾವಾಗ ಎಂದು...

ಜೆಡಿಎಸ್ ಪಕ್ಷ ವಿಸರ್ಜನೆ ಯಾವಾಗ ಎಂದು ಪ್ರಶ್ನಿಸುವವರಿಗೆ ಕುಮಾರಸ್ವಾಮಿ ಉತ್ತರ ಹೀಗಿದೆ....

31 May 2023 9:33 AM IST
share
ಜೆಡಿಎಸ್ ಪಕ್ಷ ವಿಸರ್ಜನೆ ಯಾವಾಗ ಎಂದು ಪ್ರಶ್ನಿಸುವವರಿಗೆ ಕುಮಾರಸ್ವಾಮಿ ಉತ್ತರ ಹೀಗಿದೆ....

ಬೆಂಗಳೂರು, ಮೇ 31: ವಿಧಾನಸಭೆ ಚುನಾವಣೆಯ ಸೋಲಿನ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವನ್ನು ಯಾವಾಗ ವಿಸರ್ಜನೆ ಮಾಡುತ್ತೀರಿ ಎಂಬ ಕಾಂಗ್ರೆಸ್ ಸಚಿವರು, ಶಾಸಕರುಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ" ಎಂದು ಹೇಳಿದ್ದಾರೆ.

"ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ. ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ. ಕನ್ನಡ ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ'' ಎಂದು ತಿರುಗೇಟು ನೀಡಿದ್ದಾರೆ.

''ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು. ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ'' ಎಂದು ಕುಮಾರಸ್ವಾಮಿ ನುಡಿದಿದ್ದಾರೆ.

''ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ'' ಎಂದು ಛೇಡಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋತರೆ @JanataDal_S ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದರು. ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. 2/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
share
Next Story
X