ಶಿವಮೊಗ್ಗ: ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪ; ಲೋಕಾಯುಕ್ತ ದಾಳಿ

ಶಿವಮೊಗ್ಗ: ಜಿಲ್ಲೆಯಲ್ಲಿ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಹೊಂದಿದ ಆರೋಪದಡಿಯಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.
ಶಿವಮೊಗ್ಗ ಶರಾವತಿ ನಗರ, ಶೆಟ್ಟಿಹಳ್ಳಿ ಹಾಗೂ ಶಿಕಾರಿಪುರದಲ್ಲಿ ದಾಳಿ ನಡೆಸಿದೆ. ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಪ್ರಶಾಂತ್ ಮನೆ ಹಾಗೂ ತೋಟದ ಮನೆ ಮೇಲೆ ರೇಡ್ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಶಿಕಾರಿಪುರದಲ್ಲೂ ಲೋಕಾಯುಕ್ತ ದಾಳಿ ನಡೆಸಿದ್ದು, ಜಿಲ್ಲಾ ಪಂಚಾಯಿತಿ ಇಂಜಿನಿಯರ್ ಶಂಕರ್ ನಾಯ್ಕ್ ಶಿಕಾರಿಪುರದ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿ ಪರಿಶೀಲನೆ ನಡೆಸಿದೆ.
Next Story