ತುಮಕೂರು: ಕೆ.ಐ.ಎ.ಡಿ.ಬಿ. ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ತುಮಕೂರು, ಮೇ 31: ತುಮಕೂರಿನ ಆರ್.ಟಿ. ನಗರದಲ್ಲಿರುವ ಕೆ.ಐ.ಎ.ಡಿ.ಬಿ. ಅಧಿಕಾರಿ ನರಸಿಂಹಮೂರ್ತಿ ಎಂಬವರ ಮನೆ ಮೇಲೆ ಇಂದು ಮುಂಜಾನೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಿದ್ದಾರೆ.
ನರಸಿಂಹಮೂರ್ತಿ ವಿರುದ್ಧ ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿ ಕಾಗದ ಪತ್ರಗಳು ಹಾಗೂ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಮನೆಯಲ್ಲಿರುವ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಇಲಾಖೆ ಅಧಿಕಾರಿಗಳು ಅವುಗಳನ್ನು ತೂಕ ಮಾಡುವಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.
ಬೆಳಗ್ಗೆ ಸುಮಾರು ಐದು ವಾಹನಗಳಲ್ಲಿ ದಿಢೀರ್ ಆಗಮಿಸಿದ ಲೋಕಾಯುಕ್ತ ಡಿಎಸ್‍ಪಿಗಳಾದ ಮಂಜುನಾಥ್ ಹಾಗೂ ಹರೀಶ್ ತಂಡದಿಂದ ಶೋಧ ನಡೆಯುತ್ತಿದೆ.
Next Story