ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡ ಜಗದೀಶ್ ಶೆಟ್ಟರ್ ಅವರ ಬಾದಾಮಿ ನಗರದಲ್ಲಿರುವ ನಿವಾಸಕ್ಕೆ ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸ್ಥಾನ ಸಿಗದ ಹಿನ್ನೆಲೆ ಅಭಿಮಾನಿಗಳು ಬೇಸರಗೊಂಡಿದ್ದು, ಮುಂದಕ್ಕೆ ಪಕ್ಷದಲ್ಲಿ ಯೋಜನಾ ಆಯೋಗ ಉಪಾಧ್ಯಕ್ಷ ಅಥವಾ ಸೂಕ್ತ ಸ್ಥಾನ ಮಾನ ನೀಡುವ ಬಗ್ಗೆ ಡಿಕೆಶಿ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಶೆಟ್ಟರ್ ಜೊತೆ ಉಪಹಾರ ಸೇವಿಸಿದ ಮುಖಂಡರು ಅರ್ಧ ತಾಸಿಗೂ ಹೆಚ್ಚು ಹೊತ್ತು ಚರ್ಚೆ ನಡೆಸಿದರು. ಸಚಿವರಾದ ಲಕ್ಷ್ಮಿ ಹೆಬ್ಬಾಳಕರ, ಸತೀಶ ಜಾರಕಿಹೊಳಿ ಮತ್ತು ಶಾಸಕ ಎನ್.ಎಚ್. ಕೋನರೆಡ್ಡಿ ಇದ್ದರು.
Next Story