ಕುಸ್ತಿಪಟುಗಳ ಪ್ರತಿಭಟನೆ ಕುರಿತು ಪ್ರಶ್ನೆ ಕೇಳುತ್ತಿದ್ದಂತೆ ಓಡಿ ಹೋದ ಕೇಂದ್ರ ಸಚಿವೆ; ವಿಡಿಯೋ ವೈರಲ್

ಹೊಸದಿಲ್ಲಿ: ಪ್ರತಿಭಟನಾ ನಿರತ ಕುಸ್ತಿಪಟುಗಳ ಕುರಿತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವುದು ಪ್ರತಿಪಕ್ಷಗಳ ತೀವ್ರ ಟೀಕೆಗೆ ಕಾರಣವಾಗಿದೆ. ಕುಸ್ತಿಪಟುಗಳ ಕುರಿತು ಪ್ರಶ್ನೆಗಳನ್ನು ಕೇಳುವಾಗ ತರಾತುರಿಯಲ್ಲಿ ಓಡಿ ಹೋಗುವ ಅವರ ವಿಡಿಯೋ ವೈರಲ್ ಆಗಿದೆ.
"ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ನೀವು ಏನು ಹೇಳುತ್ತೀರಿ?" ಎಂದು ಸುದ್ದಿಗಾರರು ಸಚಿವೆ ಲೇಖಿಯನ್ನು ಕೇಳಿದರು. ಅದಕ್ಕೆ ಕಾನೂನು ಪ್ರಕ್ರಿಯೆ ನಡೆಯುತ್ತಿದೆ ಎಂದ ಅವರು ನಂತರ ಅಲ್ಲಿಂದ ತರಾತುರಿಯಲ್ಲಿ ತೆರಳುವ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋವನ್ನು ಹಂಚಿಕೊಂಡಿರುವ ಕಾಂಗ್ರೆಸ್, ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಲೇವಡಿ ಮಾಡಿದೆ.
महिला पहलवानों के मुद्दे पर केंद्रीय मंत्री मीनाक्षी लेखी ने दी तीखी प्रतिक्रिया
— Congress (@INCIndia) May 30, 2023
आप खुद देखें pic.twitter.com/9XqyJcwmgD
Next Story