ಮೈಸೂರು ಮನಪಾ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು, ಮೇ 31: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಬೆಳಗ್ಗೆ ದಾಳಿ ನಡೆಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮಹೇಶ್ ಕುಮಾರ್ ಅವರ ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದಲ್ಲಿರುವ ಮನೆಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಜೊತೆಗೆ ಅವರ ತೋಟದ ಮನೆ ಸೇರಿ ಹಲವು ಕಡೆಗಳಲ್ಲಿ 13 ಲೋಕಾಯುಕ್ತ ತಂಡ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Next Story