'ಐದು ಗ್ಯಾರಂಟಿ ಯೋಜನೆ'ಗಳ ಜಾರಿ ಬಗ್ಗೆ ಸಿ ಎಂ ಮಹತ್ವದ ಸಭೆ

ಬೆಂಗಳೂರು, ಮೇ 31: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದ ಜನತೆಗೆ ನೀಡಿದ್ದ 'ಐದು ಗ್ಯಾರಂಟಿ ಯೋಜನೆ'ಗಳ ಜಾರಿ ಹಿನ್ನೆಲೆಯಲ್ಲಿ ಇಂದು ಎಲ್ಲ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ಯಂತ ಮಹತ್ವದ ಸಭೆಯನ್ನು ನಡೆಸಿದರು.
ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಕೆ.ಎಚ್. ಮುನಿಯಪ್ಪ, ಡಾ.ಜಿ.ಪರಮೇಶ್ವರ್, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೆ.ಜೆ.ಜಾರ್ಜ್, ಎಂಬಿ.ಪಾಟೀಲ್, ರಾಮಲಿಂಗ ರೆಡ್ಡಿ ಸೇರಿದಂತೆ ಇನ್ನಿತರರು ಹಾಜರಿದ್ದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ಮಂತ್ರಿ ಪರಿಷತ್ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ, ಕೆ ಜೆ ಜಾರ್ಜ್, ಎಂ ಬಿ ಪಾಟೀಲ್, ಕೆ ಎಚ್ ಮುನಿಯಪ್ಪ, ರಾಮಲಿಂಗಾರೆಡ್ಡಿ ಮತ್ತಿತರರು ಭಾಗವಹಿಸಿದ್ದರು.
Next Story