Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗ್ಯಾರಂಟಿ ಯೋಜನೆಗಳನ್ನು ಶರತ್ತುಗಳಿಲ್ಲದೆ...

ಗ್ಯಾರಂಟಿ ಯೋಜನೆಗಳನ್ನು ಶರತ್ತುಗಳಿಲ್ಲದೆ ಜಾರಿ ಮಾಡಲು ಗೋವಿಂದ ಕಾರಜೋಳ ಆಗ್ರಹ

31 May 2023 8:18 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಗ್ಯಾರಂಟಿ ಯೋಜನೆಗಳನ್ನು ಶರತ್ತುಗಳಿಲ್ಲದೆ ಜಾರಿ ಮಾಡಲು ಗೋವಿಂದ ಕಾರಜೋಳ ಆಗ್ರಹ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಶರ್ತಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕೆಂದು ಕಾಂಗ್ರೆಸ್‍ನವರು, ಇಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷ ಹಾಗೂ ಈಗಿನ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ನಾಡಿನ ಜನತೆಗೆ 5 ಗ್ಯಾರಂಟಿಗಳನ್ನು ಕೊಟ್ಟಿದ್ದರು. ಅಲ್ಲದೆ, ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಟೀಕಿಸಿದರು.

ಗ್ಯಾರಂಟಿ ಕಾರ್ಡ್ ಜೋಪಾನವಾಗಿ ಇಟ್ಟುಕೊಳ್ಳಿ; ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೊದಲನೇ ಸಂಪುಟ ಸಭೆಯಿಂದ ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ನಿಮ್ಮ ಕುಟುಂಬಕ್ಕೆ ಪ್ರತಿ ತಿಂಗಳೂ ಕನಿಷ್ಠ ರೂ. 10 ಸಾವಿರದಷ್ಟು ಅನುಕೂಲ ಆಗಲಿದೆ ಎಂದು ಜನರಿಗೆ ಭರವಸೆ ಕೊಟ್ಟು ಮೋಸ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಕಾಂಗ್ರೆಸ್ ಪಕ್ಷವು ಮೋಸ, ವಂಚನೆ, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಯಾವ ಮಟ್ಟಕ್ಕಾದರೂ ಹೋಗುವುದನ್ನು ಸ್ವಾತಂತ್ರ್ಯಾನಂತರದ 60 ವರ್ಷಗಳಲ್ಲಿ ಮಾಡುತ್ತಲೇ ಬಂದಿದೆ. ಮೊದಲ 60 ವರ್ಷಗಳಲ್ಲಿ ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಆಡಳಿತ ಮಾಡಿದ್ದರು. ಬಡವರ ಮೂಗಿಗೆ ತುಪ್ಪ ಸವರಿದರು; ಗರೀಬಿ ಹಠಾವೋ ಮಾಡುವುದಾಗಿ ಹೇಳಿದ್ದರೂ ಬಡತನ ನಿರ್ಮೂಲನೆ, ಬಡವರ ಕಲ್ಯಾಣ, ದೀನದಲಿತರ ಉದ್ಧಾರ ಮಾಡಲಿಲ್ಲ ಎಂದು ತಿಳಿಸಿದರು.

ಜನರಿಗೆ ಸತತವಾಗಿ ಮೋಸ ಮಾಡುತ್ತಾ ಬಂದ ಕಾಂಗ್ರೆಸ್ ಪಕ್ಷವು ಇವತ್ತು ಕರ್ನಾಟಕದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ವಿವಿಧ ಗ್ಯಾರಂಟಿಗಳನ್ನು ಕೊಟ್ಟಿದೆ. ಕುಟುಂಬದ ಯಜಮಾನಿಗೆ 2 ಸಾವಿರ ಕೊಡುವುದಾಗಿ ತಿಳಿಸಿದ್ದರು. ಈಗ ಅತ್ತೆಗೆ ಮಾತ್ರ ಕೊಡುವುದಾಗಿ ಹೇಳುತ್ತಿದ್ದಾರೆ. ಅದೇ ಅತ್ತೆಗೆ 4 ಮಕ್ಕಳಿದ್ದರೆ ಅವರು ಬೇರೆ ಬೇರೆ ಮನೆಯಲ್ಲಿರುತ್ತಾರೆ. ಇದನ್ನು ಗಮನಿಸಿ ಯಾವುದೇ ಶರ್ತವಿಲ್ಲದೆ ಪ್ರತಿ ಕುಟುಂಬದ ಯಜಮಾನಿಗೆ 2 ಸಾವಿರ ಕೊಡಬೇಕು ಎಂದು ಆಗ್ರಹಿಸಿದರು.

ಪದವೀಧರ ನಿರುದ್ಯೋಗಿಗೆ 3 ಸಾವಿರ ಕೊಡುವ ಭರವಸೆ ಕೊಟ್ಟಿದ್ದರು. ಇದೀಗ ಈ ವರ್ಷ ಉತ್ತೀರ್ಣರಾದವರಿಗೆ ಮಾತ್ರ ಎನ್ನುತ್ತಿದ್ದಾರೆ. ಚುನಾವಣೆ ಫಲಿತಾಂಶ ಬಂದ ದಿನ ಎಷ್ಟು ಜನ ನಿರುದ್ಯೋಗಿ ಪದವೀಧರರು, ಡಿಪ್ಲೊಮಾ ಪಡೆದವರು ಇದ್ದರೋ ಅಂದರೆ ಸುಮಾರು 50 ಲಕ್ಷದಿಂದ 60 ಲಕ್ಷ ಯುವಜನರಿಗೆ 3 ಸಾವಿರ ಮತ್ತು ಒಂದೂವರೆ ಸಾವಿರ ಕೊಡಲೇಬೇಕು ಎಂದು ಒತ್ತಾಯಿಸಿದರು. ಈ ವರ್ಷ ಪಾಸಾದವರಿಗೆ ಅಂತ ನಿಮ್ಮ ಪ್ರಣಾಳಿಕೆಯಲ್ಲಿ ಹೇಳಬೇಕಿತ್ತು; ಹೇಳಿಲ್ಲ ಅಲ್ಲವೇ ಎಂದು ಪ್ರಶ್ನಿಸಿದರು.

ವಿದ್ಯುತ್ ನನಗೂ ಫ್ರೀ, ನಿಮಗೂ ಫ್ರೀ ಎಂದಿದ್ದರು. ಮಹದೇವಪ್ಪಗೂ ಫ್ರೀ; ಮತ್ತೊಬ್ಬರಿಗೂ ಫ್ರೀ ಎಂದು ತಿಳಿಸಿದ್ದರು. ಆದಾಯ ತೆರಿಗೆ ಪಾವತಿಸುವ ತಮಗೂ ಫ್ರೀ ಎಂದು ಸಿದ್ದರಾಮಯ್ಯನವರು ಹೇಳಿದ್ದರು. ಆದ್ದರಿಂದ ಶರ್ತರಹಿತವಾಗಿ ಎಲ್ಲರಿಗೂ ಉಚಿತ ವಿದ್ಯುತ್ ನೀಡಬೇಕು. ಅದನ್ನು ತಪ್ಪಿಸಬೇಡಿ ಎಂದು ಸಿದ್ದರಾಮಯ್ಯರನ್ನು ಒತ್ತಾಯಿಸಿದರು.

10 ಕೆಜಿ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಯಾಕೆ ಕೇಳುತ್ತೀರಿ ಎಂದು ಪ್ರಶ್ನಿಸಿದ ಅವರು, ಮಾರ್ಕೆಟ್‍ನಲ್ಲಿ ಅಕ್ಕಿ ಬೇಕಾದಷ್ಟು ಸಿಗುತ್ತದೆ. ಖರೀದಿಸಿ ನಾಳೆಯಿಂದಲೇ ವಿತರಣೆ ಆರಂಭಿಸಿರಿ. ಉಚಿತ ಬಸ್ ಪ್ರಯಾಣ ಕೊಡುವುದಾಗಿ ಹೇಳಿದ್ದಾರೆ. ಸರಕಾರದ ನಿರ್ಧಾರವನ್ನು ಕಾದು ನೋಡೋಣ. ಉಚಿತಗಳ ಗ್ಯಾರಂಟಿ ಜಾರಿ ಮಾಡದಿದ್ದರೆ ನಾಡಿನ ಜನ ಇವರಿಗೆ ರಸ್ತೆಯಲ್ಲಿ ಓಡಾಡಲು  ಬಿಡುವುದಿಲ್ಲ  ಎಂದು ಎಚ್ಚರಿಸಿದರು.

 ದೀನದಲಿತರಿಗೆ ಶಿಕ್ಷಣ ಕ್ಷೇತ್ರಕ್ಕಾಗಿ ಕೊಡುವ ಅನುದಾನದ ಹಣವನ್ನು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಳಸುವ ಮಾಹಿತಿ ಇದೆ. ಹೀಗೆ ಮಾಡಿದರೆ ದೊಡ್ಡ ಹೋರಾಟ ಆಗಲಿದೆ. ದೀನದಲಿತರ ವಿದ್ಯಾಭ್ಯಾಸ, ಊಟ ವಸತಿ, ಸುಸಜ್ಜಿತ ವಸತಿ ಶಾಲೆ ನಿರ್ಮಾಣ, ಹಾಸ್ಟೆಲ್ ನಿರ್ಮಾಣ, ನಿಗಮಗಳ ಮೂಲಕ ಭೂಮಿ ಖರೀದಿಗೆ ಮತ್ತು ಸಾಲ ಸೌಲಭ್ಯಗಳಿಗೆ, ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದ ಅನುದಾನವನ್ನು ಗ್ಯಾರಂಟಿಗಾಗಿ ಬಳಸಿ ಮೋಸ ಮಾಡಿದರೆ ಈ ದೀನದಲಿತರು ರಸ್ತೆಗೆ ಇಳಿದು ಹೋರಾಡುತ್ತಾರೆ ಎಂದೂ ಅವರು ಎಚ್ಚರಿಕೆ ನೀಡಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X