ಮಂಗಳೂರು: ಗಣಿ, ಭೂ ವಿಜ್ಞಾನ ಇಲಾಖೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅಧಿಕಾರಿಯಾಗಿದ್ದ ನಿರಂಜನ್ ಅವರ ಅಪಾರ್ಟ್ಮೆಮೆಂಟ್ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದೆ.
ನಿರಂಜನ್ ರಿಗೆ ಸೇರಿದ ನಗರದ ಪಂಪ್‌ವೆಲ್ ನಲ್ಲಿರುವ ಅಪಾರ್ಟ್ಮೆಮೆಂಟ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಇದೇ ವೇಳೆ ನಿರಂಜನ್ ಅವರ ಪತ್ನಿಗೆ ಸೇರಿರುವ ಡಯೋಗ್ನಾಸ್ಟಿಕ್ ಲ್ಯಾಬ್ ನಲ್ಲೂ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಕುಶಾಲ ನಗರ ಮತ್ತು ಪಿರಿಯಾಪಟ್ಟಣದಲ್ಲಿರುವ ನಿವಾಸಗಳ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Next Story