Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ...

ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿ ಅಧಿಕ: ಶಾಸಕ ಅಶೋಕ್ ರೈ

ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

31 May 2023 12:27 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿ ಅಧಿಕ: ಶಾಸಕ ಅಶೋಕ್ ರೈ
ಪುತ್ತೂರು ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಮಕ್ಕಳ ಕಲಿಕೆಯಲ್ಲಿ ಶಿಕ್ಷಕರ ಜೊತೆಗೆ ಪೋಷಕರ ಜವಾಬ್ದಾರಿ ಅಧಿಕವಾಗಿದೆ. ಮಕ್ಕಳ ಶಿಕ್ಷಣದ ಬೆಳವಣಿಗೆಗೆ ಶೇ.60 ರಷ್ಟು ಶಿಕ್ಷಕರ ಸಹಾಯಬೇಕು. ಉಳಿದ ಶೇ.40 ಮಕ್ಕಳ ತಂದೆತಾಯಿಯ ಜವಾಬ್ದಾರಿಯಾಗಿದೆ. ಈ ಎರಡೂ ವಿಚಾರಗಳು ಸಾಧ್ಯವಾದರೆ ಶಿಕ್ಷಣದಲ್ಲಿ ಪ್ರಗತಿ ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ಬದಲಾವಣೆ ಆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಅವರು ಬುಧವಾರ ನಗರದ ಹಾರಾಡಿ ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಾಲಾ ಪ್ರಾರಂಬೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. 

ಅವಿಭಜಿತ ಪುತ್ತೂರು ತಾಲೂಕಿನಲ್ಲಿ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಕರ ಕೊರತೆಯಾಗಲಾರದು. ಈಗಾಗಲೇ ನೇರನೇಮಕಾತಿ ಮೂಲಕ 130 ಶಿಕ್ಷಕರು ಹಾಗೂ 180 ಅತಿಥಿ ಶಿಕ್ಷಕರು ನೇಮಕಗೊಳ್ಳಲಿದ್ದಾರೆ. ಶಾಲೆಗಳಲ್ಲಿ ಕಟ್ಟಡ ಕೊರತೆ, ಶೌಚಾಲಯದ ಕೊರತೆಗಳು ಸಹಜ. ಸರ್ಕಾರಿ ಶಾಲೆಗಳೆಂದರೆ ಬಡವರ ಮಕ್ಕಳು ಓದುವ ಶಾಲೆ ಎಂಬುವುದು ತಪ್ಪು ಗ್ರಹಿಕೆ. ಪ್ರಸ್ತುತ ಸಾಲಿನಲ್ಲಿ 770 ಮಕ್ಕಳಿರುವ ಹಾರಾಡಿ ಶಾಲೆಯೇ ಇದಕ್ಕೆ ಉತ್ತಮವಾದ ಉದಾಹರಣೆಯಾಗಿದೆ ಎಂದರು. 

ನಮ್ಮ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳು ಹಾರಾಡಿ ಶಾಲೆಯಂತೆ ಮಾದರಿಯಾಗಬೇಕಾಗಿದೆ. ಇದಕ್ಕೆ ಶಿಕ್ಷಕರ ಕೊಡುಗೆ ಅತೀ ಅಗತ್ಯವಾಗಿದೆ ಎಂದು ಅಶೋಕ್ ರೈ ಹೇಳಿದರು. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ವಿಷಯವಾರು ಶಿಕ್ಷಕರ ಕೊರತೆ ಇದೆ. ವಿಷಯವಾರು ಶಿಕ್ಷಕ ನೇಮಕಾತಿ ಬಗ್ಗೆ ಸರ್ಕಾರದ ಜತೆ ಮಾತನಾಡುವುದಾಗಿ ತಿಳಿಸಿದ ಅವರು ಶಾಲೆಗಳ ಮೂಲಭೂತ ಸೌಕರ್ಯಗಳ ಒದಗಿಸುವಿಕೆಗೆ ಆದ್ಯತೆ ನೀಡುವುದಾಗಿ ತಿಳಿಸಿ ಶಾಲೆಗಳ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡಬೇಡಿ. ಶಿಕ್ಷಕರ ನಡುವೆ ಭಿನ್ನಾಭಿಪ್ರಾಯಗಳು ಉಂಟಾದಾಗ ಅದನ್ನು ಮೊದಲು ಸರಿಪಡಿಸಿಕೊಳ್ಳಿ ಎಂದು ಹೇಳಿದರು. 

ಸರ್ಕಾರಿ ವ್ಯವಸ್ಥೆಯಲ್ಲಿ ಬೇರೆ ಬೇರೆ ಇಲಾಖೆಗಳಲ್ಲಿ ಬಹಳಷ್ಟು ಹುದ್ದೆಗಳಿವೆ. ಆದರೆ ನಮ್ಮ ಯುವಕರಿಗೆ ಈ ಮಾಹಿತಿಯೇ ಗೊತ್ತಾಗುತ್ತಿಲ್ಲ. ಹುದ್ದೆಗಳಿಗೆ ಅರ್ಜಿ ಕರೆದರೂ ದಕ್ಷಿಣಕನ್ನಡದ ಯುವಕ-ಯುವತಿಯರು ಯಾರೂ ಅರ್ಜಿ ಸಲ್ಲಿಸುವುದೇ ಇಲ್ಲ. ಕಾರಣ ಅವರಿಗೆ ಮಾಹಿತಿಯ ಕೊರತೆ. ಅದಕ್ಕಾಗಿ ಯುವಕ-ಯುವತಿಯರು ಹೆಚ್ಚು ಪತ್ರಿಕೆಗಳನ್ನು ಓದಬೇಕು. ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಜತೆಗೆ ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದ ಅವರು ಉದ್ಯೋಗಳತ್ತ ಯುವಜನತೆಯನ್ನು ಆಕರ್ಷಿಸಲು ಪ್ರತೀ ವರ್ಷವೂ ಉದ್ಯೋಗ ಮೇಳ ಹಾಗೂ ಮಾಹಿತಿ ಶಿಬಿರವನ್ನು ನಡೆಸುವುದಾಗಿ ಅವರು ಹೇಳಿದರು. 

ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, ಪುತ್ತೂರು ಕ್ಷೇತ್ರದಲ್ಲಿ ಶೈಕ್ಷಣಿಕವಾದ ಅಭಿವೃದ್ಧಿ ಯಾಗುತ್ತಿದೆ. ಕಳೆದ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಸ್ವಲ್ಪದರಲ್ಲಿ ನಾವು ಜಿಲ್ಲೆಯಲ್ಲಿ ಮೊದಲ ಸ್ಥಾನ ಕಳೆದು ಕೊಂಡಿದ್ದೇವೆ. ಮೌಲ್ಯಯುತ ಶಿಕ್ಷಣದಿಂದ ಮಕ್ಕಳ ಭವಿಷ್ಯತ್ತನ್ನು ರೂಪಿಸಲು ಸಾಧ್ಯವಾಗುತ್ತದೆ. ಮಾನವೀಯ ಗುಣಗಳನ್ನು ರೂಪಿಸಿಕೊಳ್ಳಲು ಮೌಲ್ಯಯುತ ಶಿಕ್ಷಣ ದೊರೆತಾಗ ಮಾತ್ರ ಸಾಧ್ಯ. ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಕಾಣುತ್ತಿದೆ. ಪೋಷಕರ ಈ ಮನೋಭಾವನೆ ಬದಲಾಗಬೇಕಿದೆ. ಶಿಕ್ಷಕರ ಚಟುವಟಿಕೆ ಮತ್ತು ಲವಲವಿಕೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪೀಕರಣಗೊಳ್ಳುತ್ತದೆ ಎಂದು ಹೇಳಿದರು.

ಶಾಲಾ ಆರಂಭೋತ್ಸವದಂದು ಮೆರವಣಿಗೆ ಮೂಲಕ ಬಂದ ಮಕ್ಕಳನ್ನು ಆರತಿ ಬೆಳಗಿ, ಪುಷ್ಪವೃಷ್ಟಿಗೈದು ಶಿಕ್ಷಕಿಯರು ಶಾಲೆಗೆ ಸ್ವಾಗತಿಸಿದರು. ಸಭಾ ಕಾರ್ಯಕ್ರಮದಲ್ಲಿ  ನಗರಸಭೆ ಸದಸ್ಯೆ ಪ್ರೇಮಲತಾ ನಂದಿಲ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನವೀನ್ ಕುಮಾರ್ ರೈ, ಅಕ್ಷರ ದಾಸೋಹದ ಸಹಾಯಕ ನಿದೇಶಕ ನವೀನ್ ವೇಗಸ್ ಶಿಕ್ಷಣ ಇಲಾಖೆಯ ಹರಿಪ್ರಸಾದ್, ವಿಷ್ಣುಪ್ರಸಾದ್ ಉಪಸ್ಥಿತರಿದ್ದರು.

ಹಾರಾಡಿ ಶಾಲಾ ಮುಖ್ಯ ಶಿಕ್ಷಕ ಕೆ.ಕೆ. ಮಾಸ್ತರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್. ಆರ್. ಸ್ವಾಗತಿಸಿದರು. ಶಿಕ್ಷಕಿ ವನಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಈ ಸಂದರ್ಭ ಶಾಸಕರು ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರಗಳನ್ನು ಸಾಂಕೇತಿಕವಾಗಿ ವಿತರಿಸಿದರು. ನೂತನ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಶಾಲಾ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ನಿರ್ಮಿತವಾದ ನೂತನ ಶಾಲಾ ಕೊಠಡಿಯನ್ನು ಶಾಸಕ ಅಶೋಕ್ ರೈ ಲೋಕಾರ್ಪಣೆ ಮಾಡಿದರು.  

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X