Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾನು ಹಣವನ್ನು ಪ್ರೀತಿಸಲಿಲ್ಲ,...

ನಾನು ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ: ಸಚಿವ ಮಾಂಕಾಳ್ ವೈದ್ಯ

31 May 2023 7:05 PM IST
share
ನಾನು ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ: ಸಚಿವ ಮಾಂಕಾಳ್ ವೈದ್ಯ

ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹಿಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು.

ಅವರು ಮಂಗಳವಾರ ಸಂಜೆ ನಗರದ ನಾಗಯಕ್ಷೆ ಸಭಾಭವನದಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಅಭಿನಂದಾನ ಸಮಾರಂಭದಲ್ಲಿ ಮಾತನಾಡಿದರು. 

ಚುನಾವಣಾ ಪ್ರಚಾರದಲ್ಲಿ ರಾಜಕಾರಣಿಯೊಬ್ಬ ಮತದಾರನ ಕಾಲಿಗೆ ಎರಗುತ್ತಾನೆ. ಅದು ರಾಜಕಾರಣವಲ್ಲ. ಗೆದ್ದ ನಂತರ ಮತದಾರನ ಕಾಲಿಗೆ ಬೀಳುವುದಿದೆಯಲ್ಲ ಅದು ಅಸಲಿ ರಾಜಕಾರಣವಾಗಿದೆ ಎಂದ ಅವರು ನಾನು ಬಡಜನರನ್ನು ಪ್ರೀತಿಸುತ್ತೇನೆ, ಅಷ್ಟೇ ಅಲ್ಲ ಅವರನ್ನು ಗೌರವಿಸುತ್ತೇನೆ. ಅದಕ್ಕಾಗಿ ನನ್ನಲ್ಲಿ ಹಣ ಇಲ್ಲದಿದ್ದಾಗ ಜನರೇ ನನಗೆ ಹಣ ಸಹಾಯ ಮಾಡಿದರು. ಚುನಾವಣೆ ಮುಗಿದಾಗ ನನ್ನ ಬಳಿ ಮತ್ತೊಂದು ಚುನಾವಣೆ ಎದುರಿಸುವಷ್ಟು ಹಣ ಇತ್ತು. ಎಲ್ಲರಿಗೂ ಅದನ್ನು ಮರಳಿಸಿದ್ದೇನೆ. ಮತ್ತೂ ಸ್ವಲ್ಪ ಹಣ ಮರಳಿಸುವುದಿದೆ ಎಂದರು.

ನಿನ್ನ ಮನೆಗೆ ಬಂದ ಬಡವನನ್ನು ಬರಿಗೈಯಲ್ಲಿ ಕಳುಹಿಸಿಕೊಡಬೇಡ, ದೇವರು ನಿನಗೆ ಬೇರೆ ರೂಪದಲ್ಲಿ ಸಹಾಯ ಮಾಡುವನು’ ಎಂದು ನನ್ನ ಗುರುಗಳು ಹೇಳಿದ್ದರು. ಅವರ ತತ್ವಸಿದ್ಧಾಂತದಂತೆ ನಾನು ನಡೆದುಕೊಳ್ಳುತ್ತಿದ್ದೇನೆ. ದೇವರು ಜನರ ಮೂಲಕವೇ ನನಗೆ ಎಲ್ಲ ರೀತಿಯ ಸಹಾಯ ಮಾಡುತ್ತಿದ್ದಾನೆ ಎಂದು ಹೇಳಿದರು.

ಚುನಾವಣೆಯಲ್ಲಿ ನನ್ನನ್ನೂ ಸೋಲಿಸಲು ಯಾವ ರೀತಿಯ ಸುಳ್ಳು ಹೇಳಲೂ ಸಾಧ್ಯವೋ  ಆ ಎಲ್ಲ ಸುಳ್ಳುಗಳನ್ನು ಹೇಳಿದರು. ವಾಟ್ಸಪ್ ಫೇಸ್ಬುಕ್ ಮೂಲಕ ಮಾಡಬಾರದನ್ನೆಲ್ಲವನ್ನೂ ಮಾಡಿದರು. ಆದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಗಟ್ಟಿಯಾಗಿ ನೆಲೆ ನಿಂತ ಕಾರಣ ಇಂದು ನಾನು ಇಲ್ಲಿ ಅಭಿನಂದನೆ ಸ್ವೀಕರಿಸುತ್ತಿರುವುದು. ಒಂದು ಲಕ್ಷಕ್ಕು ಅಧಿಕ ಮತಗಳನ್ನು ನೀಡಿ ಅಭೂತಪೂರ್ವ ಗೆಲುವಿಗೆ ನೀವು ಸಾಕ್ಷಿಯಾಗಿದ್ದೀರಿ. ಈ ಅಭಿನಂದಗೆ ಕೇವಲ ನೀವು ಮಾತ್ರ ಅರ್ಹರಾಗಿದ್ದೀರಿ ಎಂದು ಕಾರ್ಯಕರ್ತರಿಗೆ ಹೇಳಿದರು.

ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ, ತಂಝೀಮ್ ಮಾಜಿ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವೇಝ್, ಹಿರಿಯ ಮುಖಂಡರಾದ ಎಲ್.ಎಸ್.ನಾಯ್ಕ, ರಾಮಾ ಮೊಗೇರ್, ಸೋಮಯ್ಯ ಗೊಂಡ, ಸಚಿವರ ಪತ್ನಿ ಪುಷ್ಪಲತಾ ವೈದ್ಯ, ಪುತ್ರಿ ಬೀನಾ ವೈದ್ಯ ಮತ್ತಿತರರು ಮಾತನಾಡಿದರು.

ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷ ಅಬ್ದುಲ್ ಮಜೀದ್, ಜಿ.ಪಂ. ಮಾಜಿ ಅಧ್ಯಕ್ಷೆ ಜಯಶ್ರೀ ಮೊಗೇರ್, ಭಟ್ಕಳ ಮಹಿಳಾ ಕಾಂಗ್ರೇಸ್ ಅಧ್ಯಕ್ಷ ನಯನಾ ನಾಯ್ಕ, ಶ್ರೀಕಂಠ ಹೆಬ್ಬಾರ್, ಸಿಂಧೂ ಭಾಸ್ಕರ್ ನಾಯ್ಕ, ಗ್ರಾ.ಪಂ ಅಧ್ಯಕ್ಷರಾದ ರಾಜು ನಾಯ್ಕ ಕೊಪ್ಪ, ನಾಗಪ್ಪ ನಾಯ್ಕ ಮುಂಡಳ್ಳಿ, ಮಾಸ್ತಿ ಗೊಂಡ, ನಾಗಮ್ಮ ನಾಯ್ಕ, ಭಟ್ಕಳ ಬ್ಲಾಕ್ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ನಾಗರಾಜ್ ಮೊಗೇರ್ ಕಾರ್ಯಕ್ರಮ ನಿರೂಪಿಸಿದರು. ವಿಷ್ಣು ದೇವಾಡಿಗ ಧನ್ಯವಾದ ಅರ್ಪಿಸಿದರು. 

share
Next Story
X