Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ...

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ಎಂ.ಎಸ್. ಮೂಡಿತ್ತಾಯ ಅಧಿಕಾರ ಸ್ವೀಕಾರ

31 May 2023 8:30 PM IST
share
ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ಎಂ.ಎಸ್. ಮೂಡಿತ್ತಾಯ ಅಧಿಕಾರ ಸ್ವೀಕಾರ

ಉಳ್ಳಾಲ: ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಡಾ.ಎಂ.ಎಸ್. ಮೂಡಿತ್ತಾಯ ಇಂದು ಅಧಿಕಾರ ಸ್ವೀಕರಿಸಿದರು.

ಅವರು ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾಗಿ, ಕುಲಸಚಿವರಾಗಿ ಮತ್ತು ಗ್ಲೋಬಲ್ ಇನಿಶಿಯೇಟಿವ್ ನಿರ್ದೆಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅದಲ್ಲದೆ ಅವರು ನಿಟ್ಟೆಯಲ್ಲಿರುವ ಜಸ್ಟಿಸ್ ಕೆ. ಎಸ್. ಹೆಗ್ಡೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನ ನಿರ್ದೆಶಕರಾಗಿ, ಡಾ. ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ, ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಉಡುಪಿಯ ಎಂ.ಜಿ.ಎಂ ಕಾಲೇಜಿನಲ್ಲಿ, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮತ್ತು ದಾವಣಗೆರೆಯ ಉನ್ನತ ಶಿಕ್ಷಣ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

ಅವರು ತಮ್ಮ ಪದವಿ ಶಿಕ್ಷಣವನ್ನು ವಾಣಿಜ್ಯ ವಿಷಯದಲ್ಲಿ ಮತ್ತು ವೆಚ್ಚ ನಿರ್ವಹಣಾ ಶಾಸ್ತ್ರ (ಕಾಸ್ಟ್ ಅಕೌಂಟಿಂಗ್) ವಿಷಯದಲ್ಲಿ ಉನ್ನತ ಶಿಕ್ಷಣವನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ. ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದಲ್ಲಿ ತಮ್ಮ ಪೋಸ್ಟ್ ಡಾಕ್ಟೋರಲ್ ಸಂಶೋಧನೆಯನ್ನೂ ಪೂರ್ಣಗೊಳಿಸಿದ್ದರು.

ಡಾ. ಮೂಡಿತ್ತಾಯ ಅವರು ತಮ್ಮ ನಾಲ್ಕು ದಶಕಗಳ ಶೈಕ್ಷಣಿಕ ವೃತ್ತಿಯಲ್ಲಿ ಹಲವಾರು ನಿಯತಕಾಲಿಕಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು 10 ಪುಸ್ತಕಗಳನ್ನು ಪ್ರಕಟಿಸಿದ್ದು, ಭಾರತೀಯ ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಕರ್ನಾಟಕ ರಾಜ್ಯ ಕೃಷಿ ಮತ್ತು ಮಾರುಕಟ್ಟೆ ಮಂಡಳಿ, ನಬಾರ್ಡ್, ಫೋರ್ಡ್ ಫೌಂಡೇಶನ್, ಐಸಿಎಸ್‌ಎಸ್‌ಆರ್, ಸರ್ ರತನ್ ಟಾಟಾ ಟ್ರಸ್ಟ್, ಭಾರತ ಸರಕಾರದ ಹಣಕಾಸು ಸಚಿವಾಲಯ, ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಗ್ಲೋಬಲ್ ಎಂಗೇಜ್‌ಮೆಂಟ್ ಫಂಡ್ ಮುಂತಾದ ಸಂಸ್ಥೆಗಳ ಧನಸಹಾಯ ದೊಂದಿಗೆ ಹಲವು ಸಂಶೋಧನಾ ಯೋಜನೆಗಳನ್ನು ನಿರ್ವಹಿಸಿದ್ದಾರೆ.

ಅವರು ಮ್ಯಾನೇಜ್‌ ಮೆಂಟ್ ವಿಷಯದಲ್ಲಿ ಸಮಕಾಲೀನ ಸಮಸ್ಯೆಗಳ ಕುರಿತಾದ ಹಣಕಾಸು ಸೇರ್ಪಡೆ, ಗುಣಮಟ್ಟ ನಿರ್ವಹಣಾ ವ್ಯವಸ್ಥೆ ಮತ್ತು ಕಾರ್ಪೊರೇಟ್ ಫಿಲಾಂಡ್ಲಪಿ ಮುಂತಾದ ವಿಷಯಗಳಲ್ಲಿ ಪಿ.ಎಚ್.ಡಿ ಪದವಿಗಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ.

ಡಾ. ಮೂಡಿತ್ತಾಯ ಅವರು ಹಲವಾರು ಉನ್ನತ ಶಿಕ್ಷಣ ಹಾಗೂ ಇತರ ಸಂಸ್ಥೆಗಳ ಮಂಡಳಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯ, ನೆದರ್ ಲ್ಯಾಂಡ್ಸ್‌ನ ಎರಾಸ್ಮಸ್ ವಿಶ್ವವಿದ್ಯಾನಿಲಯ, ಉಗಾಂಡಾದ ಮಕರೆರೆ ವಿಶ್ವವಿದ್ಯಾನಿಲಯ, ಫಿಲಿಪೈನ್ಸ್ ರಾಷ್ಟ್ರೀಯ ವಿಶ್ವವಿದ್ಯಾನಿಲಯ ನ್ಯೂ ಇಂಗ್ಲೆಂಡ್ ವಿಶ್ವವಿದ್ಯಾನಿಲಯ ಮುಂತಾದ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯಗಳ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸುತ್ತಿರುವ ಅವರು ಭಾರತ ಮತ್ತು ವಿದೇಶಗಳಲ್ಲಿ ಬೋಧನೆ, ಸಂಶೋಧನೆ ಮತ್ತು ಸಲಹಾ ವಿಷಯದಲ್ಲಿ ವ್ಯಾಪಕ ಯೋಜನೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ.

share
Next Story
X