ಈ ವರ್ಷ ಮಳೆಯಿಂದ 69 ಮಂದಿ ಮೃತ್ಯು, 21,168 ಹೆಕ್ಟೇರ್ ಬೆಳೆ ಹಾನಿ: ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು: ಈ ವರ್ಷದ ಜನವರಿಯ ನಂತರ ಇದುವರೆಗೆ ಮಳೆಯಿಂದಾಗಿ 21,168 ಹೆಕ್ಟೇರ್ ಬೆಳೆ ಹಾನಿಯಾಗಿದೆ ಹಾಗೂ 69 ಮಂದಿ ಮೃತಪಟ್ಟಿದ್ದಾರೆ ಎಂದು ಕಂದಾಯ ಖಾತೆ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ರಾಜ್ಯದಲ್ಲಿ ಆಗಿರುವ ಮಳೆ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಇಲಾಖೆ ಮುಖ್ಯಸ್ಥರೊಂದಿಗೆ ಸಭೆ ನಡೆಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬೆಳೆ ಹಾನಿ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ಮಾರ್ಚ್, ಮೇ ತಿಂಗಳಿನಲ್ಲಿ ಕೆಲವು ಭಾಗಗಳಲ್ಲಿ ಹೆಚ್ಚು ಮಳೆಯಾಗಿದ್ದು, ಸೋಮವಾರ ಹಾಗೂ ಮಂಗಳವಾರ ಸುರಿದ ಮಳೆಗೆ ಕೆಲವು ಕಡೆ ಸಣ್ಣಪುಟ್ಟ ಹಾನಿಯಾಗಿದೆ ಎಂದು ಹೇಳಿದ್ದಾರೆ.
Next Story