ಮಂಗಳೂರು: ಜೂ.2ರಂದು ಸ್ಪೀಕರ್ ಯು.ಟಿ.ಖಾದರ್‌ಗೆ ಸನ್ಮಾನ

ಮಂಗಳೂರು, ಮೇ31: ಕರ್ನಾಟಕ ವಿಧಾನ ಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್‌ಗೆ ಜೂ.2ರಂದು ಅಪರಾಹ್ನ 4 ಗಂಟೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಮಂಗಳೂರಿನ ಪುರಭವನದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ದ.ಕ. ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್.ಮೊಹಮ್ಮದ್ ಮಸೂದ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಯಾಗಿ ಯೆನೆಪೋಯ ವಿವಿ ಕುಲಾಧಿಪತಿ ಯೆನೆಪೋಯ ಅಬ್ದುಲ್ ಕುಂಞಿ, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಮಾಜಿ ಶಾಸಕ ಮೊಯ್ದಿನ್ ಬಾವ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story