Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪೆನಿಗೆ...

ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪೆನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂ.ಬಿ.ಪಾಟೀಲ್

1 Jun 2023 8:47 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪೆನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಮುಂಚೂಣಿ ಐಫೋನ್ ತಯಾರಿಕಾ ಕಂಪನಿ ಫಾಕ್ಸ್ ಕಾನ್ 2024ರ ಏಪ್ರಿಲ್ 1ರ ವೇಳೆಗೆ ದೇವನಹಳ್ಳಿ ಘಟಕದಲ್ಲಿ ಉತ್ಪಾದನೆ ಆರಂಭಿಸುವ ಗುರಿ ಹೊಂದಿದ್ದು, ಇದಕ್ಕೆ ಪೂರಕವಾಗಿ ಜುಲೈ 1ರ ಹೊತ್ತಿಗೆ ಪೂರ್ತಿಯಾಗಿ ಭೂಮಿ ಹಸ್ತಾಂತರಿಸುವುದಾಗಿ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. 

ಗುರುವಾರ ಜಾರ್ಜ್ ಚು ಅವರ ನೇತೃತ್ವದಲ್ಲಿ ಫಾಕ್ಸ್ ಕಾನ್ ಕಂಪೆನಿಯ ಉನ್ನತ ಅಧಿಕಾರಿಗಳ ತಂಡವು ನಗರದ ಖನಿಜ ಭವನಕ್ಕೆ ಸೌಜನ್ಯದ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಬಗ್ಗೆ ತಿಳಿಸಿದರು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಹಾಜರಿದ್ದರು . 

ಇದರೊಂದಿಗೆ ಕಾಂಗ್ರೆಸ್ ನೇತೃತ್ವದ ಹೊಸ ಸರ್ಕಾರವು 50,000 ಜನರಿಗೆ ಉದ್ಯೋಗ ಒದಗಿಸುವ 13,600 ಕೋಟಿ ರೂಪಾಯಿಯ ಮೊತ್ತದ ಈ ಯೋಜನೆ ಜಾರಿಗೆ ವೇಗ ನೀಡಿದಂತಾಗಿದೆ.

ದೇವನಹಳ್ಳಿ ಸಾಮಾನ್ಯ ಕೈಗಾರಿಕಾ ಪ್ರದೇಶದಲ್ಲಿ (ಐಟಿಐಆರ್) ಕಾರ್ಯಯೋಜನೆಗಾಗಿ 300 ಎಕರೆ ಗುರುತಿಸಲಾಗಿದೆ. 2024ರ ಏಪ್ರಿಲ್ 1ರ ವೇಳೆಗೆ ಇಲ್ಲಿ ಕಂಪನಿಯು ತಯಾರಿಕೆ ಶುರು ಮಾಡುವ ಗುರಿ ಹಾಕಿಕೊಂಡಿದೆ. ಇದನ್ನು ಗಮನದಲ್ಲಿರಿಸಿಕೊಂಡು ಜುಲೈ 1ಕ್ಕೆ ಮುಂಚೆ ಕಂಪೆನಿಗೆ ಭೂಮಿ ಹಸ್ತಾಂತರಿಸಲಾಗುವುದು ಎಂದರು.

ಕಂಪನಿಯು ದಿನಕ್ಕೆ 50 ಲಕ್ಷ ಲೀಟರ್ ನೀರು ಬೇಕಾಗುವುದಾಗಿ ತಿಳಿಸಿದೆ.‌ ಇದನ್ನು ಪೂರೈಸುವ ಜೊತೆಗೆ ಗುಣಮಟ್ಟದ ವಿದ್ಯುತ್, ರಸ್ತೆ ಸಂಪರ್ಕ ಇತ್ಯಾದಿ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತದೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.

ಕಂಪನಿಯ ಸಿಬ್ಬಂದಿಗೆ ಬೇಕಾಗುವ ಕೌಶಲ ವಿವರಗಳನ್ನು ಕೂಡ ಕೇಳಲಾಗಿದೆ. ಅದಕ್ಕೆ ತಕ್ಕಂತೆ ಸರ್ಕಾರದ ವತಿಯಿಂದ ಅರ್ಹರಿಗೆ ಕೌಶಲಗಳ ತರಬೇತಿ ಕೊಟ್ಟು ಮಾನವ ಸಂಪನ್ಮೂಲ ಲಭ್ಯವಾಗಿಸಲು ಒತ್ತು ಕೊಡುವುದಾಗಿಯೂ ಅವರು ತಿಳಿಸಿದರು. 

ತೈವಾನ್ ಮೂಲದ ಮುಂಚೂಣಿ ಕಂಪನಿಯು ಮೂರು ಹಂತಗಳಲ್ಲಿ ಘಟಕ ನಿರ್ಮಾಣ ಪೂರೈಸಿ ಅಂತಿಮವಾಗಿ ಇಲ್ಲಿ ವರ್ಷಕ್ಕೆ 2 ಕೋಟಿ ಮೊಬೈಲ್‌ಗಳನ್ನು ತಯಾರಿಸುವ ಯೋಜನೆ ಹಾಕಿಕೊಂಡಿದೆ‌. ಈಗಾಗಲೇ ಭೂಮಿಗಾಗಿ ನಿಗದಿಗೊಳಿಸಿರುವ ಮೊತ್ತದಲ್ಲಿ ಶೇಕಡ 30ರಷ್ಟನ್ನು (90 ಕೋಟಿ ರೂಪಾಯಿ) ಕಂಪನಿಯು ಕೆ.ಐ.ಎ‌‌.ಡಿ.ಬಿ.ಗೆ ಪಾವತಿಸಿದೆ.

ಕಂಪೆನಿಯ ಪೌಲ್ ಲಿಯು, ಟಾನ್ನಿ ಲಿಯು, ಸೈಮನ್ ಸಾಂಗ್, ಭಾರತ್ ದಂಡಿ ಮತ್ತಿತರರು ಇದ್ದರು.

ಇದಕ್ಕೂ ಮುನ್ನ ಜುಬಿಲಿಯಂಟ್ ಫುಡ್ ವರ್ಕ್ಸ್ ನ ಕಾರ್ಯನಿರ್ವಾಹಕ ಉಪಾಧ್ಯಕ್ಷ ಅಮರದೀಪಸಿಂಗ್  ಅಹ್ಲುವಾಲಿಯಾ, ಎಫ್ಐಸಿಸಿಐ ಕರ್ನಾಟಕ ಮಂಡಳದ ಅಧ್ಯಕ್ಷ ಕೆ. ಉಲ್ಲಾಸ್ ಕಾಮತ್, ಕರ್ನಾಟಕ ಮಂಡಳದ ಅಧ್ಯಕ್ಷ ಶಜು ಮಂಗಳಂ, ಸಿಐಐ ಕರ್ನಾಟಕ ಮಂಡಲ ಅಧ್ಯಕ್ಷ ವಿಜಯಕೃಷ್ಣನ್  ವೆಂಕಟೇಶನ್ ಮತ್ತಿತರರು ಸಚಿವರನ್ನು ಭೇಟಿಯಾಗಿದ್ದರು.

ಐಟಿ ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ವಾಣಿಜ್ಯ ‌ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಇದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X