Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಜೆಪಿ ರೂಪಿಸಿದ್ದ ಯೋಜನೆಗಳಿಗೆ ಅನುದಾನ...

ಬಿಜೆಪಿ ರೂಪಿಸಿದ್ದ ಯೋಜನೆಗಳಿಗೆ ಅನುದಾನ ಕಡಿತ ಮಾಡಬೇಡಿ: ಸಿಎಂ ಸಿದ್ದರಾಮಯ್ಯಗೆ ಬೊಮ್ಮಾಯಿ ಪತ್ರ

1 Jun 2023 8:11 PM IST
share
ಬಿಜೆಪಿ ರೂಪಿಸಿದ್ದ ಯೋಜನೆಗಳಿಗೆ ಅನುದಾನ ಕಡಿತ ಮಾಡಬೇಡಿ: ಸಿಎಂ ಸಿದ್ದರಾಮಯ್ಯಗೆ ಬೊಮ್ಮಾಯಿ ಪತ್ರ

ಬೆಂಗಳೂರು, ಜೂ. 1: ‘ಬಿಜೆಪಿ ಸರಕಾರದ ಅವಧಿಯಲ್ಲಿ ರೂಪಿಸಿದ್ದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಮುಂದುವರೆಸಿಕೊಂಡು ಹೊಗುವುದು ಅವಶ್ಯಕ. ಹೀಗಾಗಿ ಆ ಯೋಜನೆಗಳಿಗೆ ಅನುದಾನ ಒದಗಿಸಬೇಕು. ಜತೆಗೆ ತಾವು ಕೊಡುತ್ತಿರುವ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ರೂ.ಅಗತ್ಯವಿರುವ ಹಿನ್ನೆಲೆಯಲ್ಲಿ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು ಹಾಗೂ ಜನತೆಯ ಮೇಲೆ ಯಾವುದೇ ತೆರಿಗೆ ಹೊರೆ ಹಾಕಬಾರದು’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ‘ಸಿದ್ದರಾಮಯ್ಯ ಅವರೇ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿರುವಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು 50 ಸಾವಿರ ಕೋಟಿ ರೂ.ಬೇಕೆಂದು ರಾಜ್ಯದ ಜನತೆಗೆ ತಿಳಿಸಿದ್ದೀರಿ.  ಈ ಯೋಜನೆಗಳ ಅನುಷ್ಠಾನದ ಸಂದರ್ಭದಲ್ಲಿ ಕೆಲವು ಎಚ್ಚರಿಕೆ ವಹಿಸುವುದು ರಾಜ್ಯದ ಪ್ರಮುಖ ಕ್ಷೇತ್ರಗಳಾದ ಶಿಕ್ಷಣ, ಆರೋಗ್ಯ, ಮಹಿಳಾ ಅಭಿವೃದ್ಧಿ, ಮೂಲಭೂತ ಸೌಕರ್ಯ, ರೈತರ, ದೀನ ದಲಿತರ ಹಾಗೂ ಹಿಂದುಳಿದ ವರ್ಗಗಳ ಹಿತ ಕಾಪಾಡುವುದು ಅವಶ್ಯಕತೆ ಇದೆ ಎನ್ನುವ ಮಾತು ಜನರಲ್ಲಿ ಕೇಳಿ ಬರುತ್ತಿದೆ. ಅದನ್ನು ತಮ್ಮ ಗಮನಕ್ಕೆ ತರಲು ಬಯಸಿರುತ್ತೇನೆ’ ಎಂದು ಹೇಳಿದ್ದಾರೆ.

‘ರೈತರಿಗೆ ನೀಡಲಾಗುವ ಬಡ್ಡಿ ರಹಿತ ಅಲ್ಪಾವಧಿ ಸಾಲದ ಮಿತಿ 3 ಲಕ್ಷ ರೂ.ನಿಂದ ಐದು ಲಕ್ಷ ರೂ.ಗೆ ಏರಿಸಿರುವುದು ಯಾವುದೇ ಹಣಕಾಸಿನ ಕಡಿತ ಮಾಡುವುದು ಸೂಕ್ತವಲ್ಲ. ರೈತರ ಕನಿಷ್ಟ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಆವರ್ತ ನಿಧಿ 3500 ಕೋಟಿ ರೂ.ಗೆ ಹೆಚ್ಚಿಸಲು 2023-24ರ ಆಯವ್ಯಯದಲ್ಲಿ 1500ಕೋಟಿ ರೂ. ಒದಗಿಸಲಾಗಿದ್ದು ಇದು ಅತ್ಯಂತ ಅಗತ್ಯವಾಗಿದ್ದು ಇದನ್ನು ಕಡಿತಗೊಳಿಸಬಾರದು’ ಎಂದು ಅವರು ಸಲಹೆ ನೀಡಿದ್ದಾರೆ.

‘ವಿವೇಕ ಯೋಜನೆ ಅಡಿಯಲ್ಲಿ 7601 ಶಾಲಾಕೊಠಡಿಗಳು ಹಾಗೂ ಇತರ ಯೋಜನೆ ಅಡಿಯಲ್ಲಿ ಸೇರಿ ಒಟ್ಟು  9556 ಶಾಲಾ ಕೊಠಡಿಗಳ ನಿರ್ಮಾಣವನ್ನು ಪ್ರಸ್ತುತ ವರ್ಷ ಪೂರ್ಣಗೊಳಿಸುವ ಉದ್ದೇಶವಿದ್ದು ಇದರಲ್ಲಿ ಅನುದಾನದ ಕಡಿತ ಮಾಡಬಾರದು. ರೈತರು, ಕಾರ್ಮಿಕರು, ಮೀನುಗಾರರು, ನೇಕಾರರು ಇತರಿರಿಗೆ ರೈತ ವಿದ್ಯಾನಿಧಿ ಕಾರ್ಯಕ್ರಮ ಮುಂದುವರೆಸುವುದು ಅತ್ಯಂತ ಅವಶ್ಯವಿದ್ದು ಸೂಕ್ತ ಅನುದಾನ ಆಯವ್ಯಯದಲ್ಲಿ ಒದಗಿಸಿದ್ದು ಕಡಿತಗೊಳಿಸಬಾರದು’ ಎಂದು ಅವರು ತಿಳಿಸಿದ್ದಾರೆ.

ಗ್ರಾಮೀಣ ಮೂಲಭೂತ ಸೌಕರ್ಯ ಯೋಜನೆಗಳಾದ ಜಲಜೀವನ ಮಿಷನ್, ಗೃಹ ನಿರ್ಮಾಣ, ನೀರಾವರಿ ಯೋಜನೆ, ಪಂಚಾಯತಿಗೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳುವುದು. ಅದೇ ರೀತಿ ರಾಜ್ಯ, ಜಿಲ್ಲಾ ರಸ್ತೆಗಳ ನಿರ್ಮಾಣ ಪ್ರಗತಿ ಮೊಟಕುಗೊಳಿಸಬಾರದು ಹಾಗೂ ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸುವುದು. ರಾಜ್ಯದ ಹಿತದೃಷ್ಟಿಯಿಂದ ಅವಶ್ಯವಿದೆ. ನಗರ ಪ್ರದೇಶಗಳಲ್ಲಿ ನಗರೊತ್ಥಾನ ಸ್ಮಾರ್ಟ್‍ಸಿಟಿ ಯೊಜನೆ, ಮೆಟ್ರೊ, ಸಬರಬನ್ ಯೋಜನೆಗಳನ್ನು ಮುಂದುವರೆಸುವುದು ಬೆಂಗಳೂರಿನ ಅಭಿವೃದ್ಧಿಗೆ ಅವಶ್ಯವಿರುತ್ತದೆ’ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

share
Next Story
X