Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶಕ್ಕೆ...

‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ

1 Jun 2023 2:45 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ಕಾವೇರಿ 2.0’ ಜನಸ್ನೇಹಿ ತಂತ್ರಾಂಶಕ್ಕೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಚಾಲನೆ

ಬೆಂಗಳೂರು, ಜೂ. 1: ‘ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೇಗ ತರುವ ಉದ್ದೇಶದಿಂದ ತಂತ್ರಜ್ಞಾನ ಬಳಕೆ ಮಾಡಿಕೊಂಡು ನಾಗರಿಕರಿಗೆ ಸೇವೆ ನೀಡುತ್ತಾ ಬಂದಿದೆ. ಇದೇ ಉದ್ದೇಶದಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 ತಂತ್ರಾಂಶವನ್ನು ಜಾರಿಗೆ ತರಲಾಗಿದೆ’ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಗುರುವಾರ ಗಾಂಧಿ ನಗರದಲ್ಲಿನ ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ ಜಿಲ್ಲಾ ನೋಂದಣಾಧಿಕಾರಿ ಕಚೇರಿಯಲ್ಲಿ ಕಾವೇರಿ 2.0 ಜನಸ್ನೇಹಿ ತಂತ್ರಾಂಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಈ ತಂತ್ರಾಂಶದ ಬಳಕೆಯಿಂದ ನಾಗರಿಕರು ತಮ್ಮ ಸ್ವತ್ತುಗಳ ನೋಂದಣಿ ಸಂದರ್ಭದಲ್ಲಿ ಉಪನೋಂದಣಿ ಕಚೆರಿಯಲ್ಲಿ ನೋಂದಣಿಗೆ ಕಾಯಬೇಕಾದ ಪ್ರಸಂಗ ಬರುವುದಿಲ್ಲ’ ಎಂದು ಹೇಳಿದರು.

‘ತಂತ್ರಾಂಶ ವೆಬ್ ಆಧರಿತವಾಗಿದ್ದು ಗಣಕಯಂತ್ರದ ಮೂಲಕ ಅಂತರ್ ಜಾಲ ಸಂಪರ್ಕದಿಂದ ಉಪ ನೋಂದಣಿ ಕಚೇರಿಗೆ ನೋಂದಣಿ ಪೂರ್ವದಲ್ಲಿ ಸಲ್ಲಿಸಬೇಕಾದ ದಾಖಲೆಗಳನ್ನು ಆನ್‍ಲೈನ್ ಮೂಲಕ ಸಂಬಂಧಪಟ್ಟ ಉಪನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದು. ನಂತರ ಉಪನೋಂದಣಾಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಸರಕಾರಕ್ಕೆ ಸಲ್ಲಿಸಬೇಕಾದ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳ ವಿವರದೊಂದಿಗೆ ಆನ್‍ಲೈನ್ ಮೂಲಕವೇ ದಾಖಲೆಗಳನ್ನು ಪರಿಶೀಲಿಸಿ ನಾಗರಿಕರ ಲಾಗ್‍ಇನ್‍ಗೆ ಕಳುಹಿಸುತ್ತಾರೆ.

ನಾಗರೀಕರು ಶುಲ್ಕಗಳನ್ನು ಆನ್‍ಲೈನ್ ಮೂಲಕ ನೇರವಾಗಿ ಖಜಾನೆಗೆ ಜಮಾ ಮಾಡುವ ಮೂಲಕ ನೋಂದಣಿ ದಿನಾಂಕವನ್ನು ನಿಗದಿ ಮಾಡಿಕೊಳ್ಳಬಹುದಾಗಿದೆ. ಆಮೂಲಕ ಉಪನೋಂದಣಾಧಿಕಾರಿಗಳ ಕಚೇರಿಯಲ್ಲೇ ದಿನಗಟ್ಟಲೆ ಕಾಯುತ್ತಿದ್ದ ನಾಗರಿಕರಿಗೆ ಕೆಲವೇ ನಿಮಿಷಗಳಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ’ ಎಂದು ಅಭಿಪ್ರಾಯಪಟ್ಟರು.

‘ಕಾವೇರಿ ತಂತ್ರಾಂಶ ಸರಕಾರದ ಬೇರೆ ಇಲಾಖೆಗಳ ತಂತ್ರಾಂಶಗಳಾದ ಭೂಮಿ, ಇ-ಸ್ವತ್ತು, ಇ-ಆಸ್ತಿಗಳೊಂದಿಗೆ ಸಂಯೋಜನೆಯಾಗಿರುವ ಕಾರಣ ಮೋಸ-ವಂಚನೆಗಳಿಗೆ ಕಡಿವಾಣ ಹಾಕಲಾಗಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯ ಒದಗಿಸಲಾಗುತ್ತಿದೆ. ಸರಕಾರವು ಜನಸ್ನೇಹಿಯಾಗಿ ಕೆಲಸ ಮಾಡಲು ಅಧಿಕಾರಿ ವರ್ಗದ ಸಹಕಾರ ಅತ್ಯಂತ ಅವಶ್ಯಕ. ಹೀಗಾಗಿ ಸರಕಾರದ ಜನಸ್ನೇಹಿ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಎಲ್ಲ ಅಧಿಕಾರಿಗಳು ಸಹಕಾರ ನೀಡಬೇಕು’ ಎಂದು ಅವರು ತಿಳಿಸಿದರು.

ಮುಂದಿನ ದಿನಗಳಲ್ಲಿ ಕಾವೇರಿ 2.0 ತಂತ್ರಾಂಶದ ಮೂಲಕ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಮತ್ತಷ್ಟು ಜನಸ್ನೇಹಿಯಾಗಲಿ ಹಾಗೂ ಈ ಮಹತ್ಕಾರ್ಯದಲ್ಲಿ ಕೆಲಸ ನಿರ್ವಹಿಸಿದ ಎಲ್ಲ ಅಧಿಕಾರಿಗಳಿಗೂ ಸಚಿವ ಕೃಷ್ಣಬೈರೇಗೌಡ ಅಭಿನಂದನೆ ಸಲ್ಲಿಸಿದರು.

ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಡಾ.ಮಮತ ಬಿ.ಆರ್. ಮಾತನಾಡಿ, ರಾಜ್ಯದ 256 ಉಪನೋಂದಣಿ ಕಚೇರಿಗಳ ಪೈಕಿ 196 ಉಪನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶ ಜಾರಿಯಾಗಿದ್ದು, ಗಾಂಧಿನಗರ ಜಿಲ್ಲಾ ನೋಂದಣಿ ವ್ಯಾಪ್ತಿಯ 9 ಉಪನೋಂದಣಿ ಕಚೇರಿಯಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ.

ಕಂದಾಯ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ಇ-ಆಡಳಿತ ಕಾರ್ಯದರ್ಶಿ ವಿ.ಪೊನ್ನುರಾಜ್  ಹಾಗೂ ಉಪ ನೋಂದಣಿ, ಮಹಾ ಪರಿವೀಕ್ಷಕರು, ಸಹಾಯಕ ನೋಂದಣಿ ಮಹಾಪರಿವೀಕ್ಷಕರು, ಗಾಂಧಿನಗರ ಜಿಲ್ಲಾ ನೋಂದಣಾಧಿಕಾರಿಗಳು, ಗಾಂಧಿನಗರ ಜಿಲ್ಲಾ ನೋಂದಣಿ ವ್ಯಾಪ್ತಿಯ ಎಲ್ಲ ಉಪ ನೋಂದಣಾಧಿಕಾರಿಗಳು ಸಿಬ್ಬಂದಿಗಳು ಹಾಜರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X